ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನೀಗ ಆರೋಗ್ಯವಾಗಿದ್ದೇನೆ: ಮಯಂಕ್ ಅಗರವಾಲ್

Published 31 ಜನವರಿ 2024, 8:28 IST
Last Updated 31 ಜನವರಿ 2024, 8:28 IST
ಅಕ್ಷರ ಗಾತ್ರ

ಬೆಂಗಳೂರು: ದಿಢೀರ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಮಯಂಕ್ ಅಗರವಾಲ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಈ ಕುರಿತು ಸ್ವತಃ ಮಯಂಕ್ ಅವರೇ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಬರೆದುಕೊಂಡಿದ್ದಾರೆ.

'ನಾನೀಗ ಆರೋಗ್ಯವಾಗಿದ್ದೇನೆ. ತಂಡಕ್ಕೆ ಪುನರಾಗಮನ ಮಾಡಲು ಕಾತರದಲ್ಲಿದ್ದೇನೆ. ನಿಮ್ಮೆಲ್ಲರ ಪ್ರಾರ್ಥನೆ, ಪ್ರೀತಿ ಹಾಗೂ ಬೆಂಬಲಕ್ಕಾಗಿ ಧನ್ಯವಾದಗಳು' ಎಂದು ಹೇಳಿದ್ದಾರೆ.

ಮಂಗಳವಾರ ನವದೆಹಲಿಯ ಮೂಲಕ ಸೂರತ್‌ಗೆ ತೆರಳುವ ವಿಮಾನದಲ್ಲಿ ಪಾನೀಯ ಸೇವಿಸಿದ್ದ ಮಯಂಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಅಗರ್ತಲಾದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು.

ಪ್ರಕರಣ ಸಂಬಂಧ ಮಯಂಕ್ ಅಗರವಾಲ್ ಪೊಲೀಸ್ ದೂರು ದಾಖಲಿಸಿದ್ದಾರೆ.

ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತನ್ನ ಮುಂದಿನ ಪಂದ್ಯದಲ್ಲಿ ಸೂರತ್‌ನಲ್ಲಿ ರೈಲ್ವೆ ಸವಾಲನ್ನು ಎದುರಿಸಲಿದೆ. ಈ ಪಂದ್ಯ ಫೆಬ್ರುವರಿ 2ರಂದು ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT