ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕಪ್‌ ಫೈನಲ್‌ಗೆ ನನಗೆ ಆಹ್ವಾನವಿರಲಿಲ್ಲ: ಕಪಿಲ್ ದೇವ್

Published 19 ನವೆಂಬರ್ 2023, 15:51 IST
Last Updated 19 ನವೆಂಬರ್ 2023, 15:51 IST
ಅಕ್ಷರ ಗಾತ್ರ

ಅಹಮದಾಬಾದ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ವಿಶ್ವಕಪ್‌ ಫೈನಲ್‌ಗೆ ತಮ್ಮನ್ನು ಆಹ್ವಾನಿಸಿರಲಿಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಭಾನುವಾರ ಹೇಳಿದ್ದಾರೆ.

ಭಾರತ 1983ರಲ್ಲಿ ಮೊದಲ ಬಾರಿ ವಿಶ್ವಕಪ್ ಗೆದ್ದಾಗ ತಂಡದ ನಾಯಕರಾಗಿದ್ದ ಕಪಿಲ್ ದೇವ್, ತಾವು ಆಗಿನ ತಂಡದ ಇತರ ಆಟಗಾರರ ಜೊತೆಗೆ ಈ ಪಂದ್ಯಕ್ಕೆ ಪ್ರಯಾಣಿಸಲು ಬಯಸಿದ್ದಾಗಿ ಹೇಳಿದ್ದಾರೆ.

‘ನನಗೆ ಆಹ್ವಾನ ಕೊಟ್ಟಿರಲಿಲ್ಲ. ನನಗೆ ಕರೆಯನ್ನೂ ಮಾಡಿಲ್ಲ. ಹೀಗಾಗಿ ನಾನು ಹೋಗಿಲ್ಲ ಅಷ್ಟೇ. ನಾನು 1983ರಲ್ಲಿ ಗೆದ್ದ ತಂಡದ ಆಟಗಾರರ ಜೊತೆ ಫೈನಲ್‌ ಪಂದ್ಯಕ್ಕೆ ಹೋಗಬೇಕೆಂದಿದ್ದೆ. ಆದರೆ ಇದು ದೊಡ್ಡ ಕಾರ್ಯಕ್ರಮ. ಅಲ್ಲಿರುವವರೆಲ್ಲರೂ ಜವಾಬ್ದಾರಿ ನಿರ್ವಹಿಸುವಲ್ಲಿ ನಿರತರಾಗಿರುತ್ತಾರೆ. ಕೆಲವೊಮ್ಮೆ ಅವರು ಮರೆತುಬಿಡುತ್ತಾರೆ’ ಎಂದು ಕಪಿಲ್‌ ದೇವ್ ಎಬಿಪಿ ನ್ಯೂಸ್‌ಗೆ ತಿಳಿಸಿದ್ದಾರೆ.

ಮಾಜಿ ನಾಯಕ ಸೌರವ್‌ ಗಂಗೂಲಿ ಅವರನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷರೆಂಬ ನೆಲೆಯಲ್ಲಿ ಆಹ್ವಾನಿಸಲಾಗಿತ್ತು. ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಹ್ವಾನಿಸುವುದು ಬಿಸಿಸಿಐ ಸಂಪ್ರದಾಯ.

ಹಾಜರಿದ್ದ ಇತರ ಗಣ್ಯರಲ್ಲಿ ಶಾರೂಕ್‌ ಖಾನ್, ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್, ಬ್ಯಾಡ್ಮಿಂಟನ್ ದಿಗ್ಗಜ ಪ್ರಕಾಶ್ ಪಡುಕೋಣೆ ಅವರೂ ಸ್ಟ್ಯಾಂಡ್‌ನಲ್ಲಿ ಕಾಣಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT