ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಬಿಎಸ್‌ಎ ವಿಶ್ವ ಕ್ರೀಡಾಕೂಟ: ಭಾರತ ಮಹಿಳಾ ತಂಡಕ್ಕೆ ಚಿನ್ನ

ಅಂಧರ ಕ್ರಿಕೆಟ್‌
Published 26 ಆಗಸ್ಟ್ 2023, 20:03 IST
Last Updated 26 ಆಗಸ್ಟ್ 2023, 20:03 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಮ್: ಭಾರತ ಅಂಧ ಮಹಿಳಾ ಕ್ರಿಕೆಟ್ ತಂಡವು ಶನಿವಾರ ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ಚಾರಿತ್ರಿಕ ಸಾಧನೆ ಮಾಡಿತು.

ಕರ್ನಾಟಕದ ಆಟಗಾರ್ತಿ ವರ್ಷಾ ಉಮಾಪತಿ ನಾಯಕತ್ವದ ಭಾರತ ತಂಡವು  ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳಿಂದ ಜಯಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 114 ರನ್ ಗಳಿಸಿತು. ಮಳೆ ಸುರಿದ ಕಾರಣ ಗೆಲುವಿನ ಗುರಿಯನ್ನು ಪರಿಷ್ಕರಿಸಲಾಯಿತು. 3.3 ಓವರ್‌ಗಳಲ್ಲಿ 42 ರನ್‌ಗಳ ಗುರಿ ಸಾಧಿಸಿದ ಭಾರತ ತಂಡವು ಜಯಭೇರಿ ಬಾರಿಸಿತು.

ವಿಶ್ವ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಅಂಧರ ಕ್ರಿಕೆಟ್ ಆಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT