ಶನಿವಾರ, ಜುಲೈ 2, 2022
25 °C

ಮಹಿಳಾ ಕ್ರಿಕೆಟ್ ಚಾಂಪಿಯನ್‌ಷಿಪ್; ಐರ್ಲೆಂಡ್, ಬಾಂಗ್ಲಾ ಕ್ಕೆ ಮಾನ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದುಬೈ(ಪಿಟಿಐ): ಅಂತರರಾಷ್ಟ್ರೀಯ ಮಹಿಳಾ ಏಕದಿನ ಕ್ರಿಕೆಟ್‌ ಚಾಂ‍ಪಿಯನ್‌ಷಿಪ್‌ನಲ್ಲಿ ಆಡಲು ಎರಡು ಹೊಸ ತಂಡಗಳಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಮಾನ್ಯತೆ ನೀಡಿದೆ. ಇದರೊಂದಿಗೆ ಒಟ್ಟು ಹತ್ತು ತಂಡಗಳು ಕಣದಲ್ಲಿ ಸ್ಪರ್ಧಿಸಲಿವೆ.

2022 ರಿಂದ 2025ರವರೆಗಿನ ವೇಳಾಪಟ್ಟಿಯಲ್ಲಿ ಬಾಂಗ್ಲಾದೇಶ ಮತ್ತು ಐರ್ಲೆಂಡ್ ತಂಡಗಳಿಗೆ ಅವಕಾಶ ನೀಡಲಾಗಿದೆ. ಉಭಯ ತಂಡಗಳೂ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕ್ರಮವಾಗಿ 9 ಹಾಗೂ 10ನೇ ಸ್ಥಾನದಲ್ಲಿವೆ. 

ಇದರೊಂದಿಗೆ ಆಸ್ಟ್ರೇಲಿಯಾ, ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್  ತಂಡಗಳೊಂದಿಗೆ ಮತ್ತೆರಡು ತಂಡಗಳು ಸೇರಿಕೊಂಡಂತಾಗಿದೆ.

‘ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ತಂಡವೂ ಎಂಟು ತ್ರಿಕೋನ ಸರಣಿಗಳನ್ನು ಆಡಲಿವೆ. ಅದರಲ್ಲಿ ನಾಲ್ಕು ತವರು ಮತ್ತು ನಾಲ್ಕು ವಿದೇಶಗಳಲ್ಲಿ ನಡೆಯಲಿವೆ. ಇದರಲ್ಲಿ ಮೊದಲ ಐದು ಸ್ಥಾನ ಪಡೆದ ತಂಡಗಳು ಮತ್ತು ಆತಿಥೇಯ ಬಳಗವು 2025ರ ವಿಶ್ವಕಪ್ ಟೂರ್ನಿಗೆ ನೇರ ಅರ್ಹತೆ ಗಿಟ್ಟಿಸಲಿವೆ. ಉಳಿದ ತಂಡಗಳು ಐಸಿಸಿ ಮಹಿಳಾ ವಿಶ್ವಕಪ್ ಕ್ವಾಲಿಫೈಯರ್‌ನಲ್ಲಿ ಸೆಣಸಿ ಅರ್ಹತೆ ಪಡೆಯಬೇಕು’ ಎಂದು ಆಡಳಿತ ಸಮಿತಿಯು ತಿಳಿಸಿದೆ. 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.