ಬೆಂಗಳೂರು: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಾರ್ಷಿಕ ಪ್ರಶಸ್ತಿಗಳಿಗಾಗಿ ನಾಮನಿರ್ದೇಶನ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಿದೆ.

ಈ ಬಾರಿ ಭಾರತದ ನಾಲ್ವರು ಆಟಗಾರರು ವಿವಿಧ ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದ್ದಾರೆ. ಇದರಂತೆ ಪ್ರಶಸ್ತಿ ರೇಸ್ನಲ್ಲಿರುವ ಭಾರತೀಯ ಕ್ರಿಕೆಟಿಗರಿಗೆ ಮತ ಹಾಕುವಂತೆ ಅಭಿಮಾನಿಗಳಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿನಂತಿಸಿದೆ.

ಟೀಮ್ ಇಂಡಿಯಾದ ಬಲಗೈ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ, ಐಸಿಸಿ ಪುರುಷರ ವರ್ಷದ ಕ್ರಿಕೆಟಿಗ ಮತ್ತು ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗಾಗಿ ನಾಮನಿರ್ದೇಶನಗೊಂಡಿದ್ದಾರೆ.

ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್, ಐಸಿಸಿ ಪುರುಷರ ವರ್ಷದ ಟ್ವೆಂಟಿ-20 ಕ್ರಿಕೆಟಿಗ ಪ್ರಶಸ್ತಿ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಮಹಿಳಾ ವಿಭಾಗದಲ್ಲಿ ಸ್ಮೃತಿ ಮಂದಾನ, ಐಸಿಸಿ ಮಹಿಳಾ ವರ್ಷದ ಏಕದಿನ ಆಟಗಾರ್ತಿ ಮತ್ತು ಕನ್ನಡತಿ ಶ್ರೇಯಾಂಕ ಪಾಟೀಲ, ಐಸಿಸಿ ಮಹಿಳಾ ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದ್ದಾರೆ.

ಮತ ಹಾಕುವುದು ಹೇಗೆ?

ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಲಾಗಿನ್ ಆಗುವ ಮೂಲಕ ನಿಮ್ಮ ನೆಚ್ಚಿನ ಆಟಗಾರರಿಗೆ ಮತ ಹಾಕಬಹುದಾಗಿದೆ.

ಕ್ರಿಕೆಟ್ ಅಭಿಮಾನಿಗಳಿಗೆ ಮತ ಹಾಕುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಈ ಲಿಂಕ್ ಕ್ಲಿಕ್ ಮಾಡಿ ಮತ ಚಲಾಯಿಸಬಹುದಾಗಿದೆ.
.Jasprit Bumrah: ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ ಪಟ್ಟಿಯಲ್ಲಿ ಬೂಮ್ರಾ .ICC ವರ್ಷದ ಉದಯೋನ್ಮುಖ ಆಟಗಾರ್ತಿ: ಕನ್ನಡತಿ ಶ್ರೇಯಾಂಕಾ ಪಾಟೀಲ ನಾಮನಿರ್ದೇಶನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.