ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಪ್ರಶಸ್ತಿ: ವಿರಾಟ್ ದಾಖಲೆ

Last Updated 22 ಜನವರಿ 2019, 20:15 IST
ಅಕ್ಷರ ಗಾತ್ರ

ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಮಂಗಳವಾರ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ)ನ ಮೂರು ಪ್ರಶಸ್ತಿಗಳನ್ನು ಗೆದ್ದು ದಾಖಲೆ ನಿರ್ಮಿಸಿದರು.

ಟೆಸ್ಟ್, ಏಕದಿನ ಮಾದರಿಯಲ್ಲಿ ಶ್ರೇಷ್ಠ ಮತ್ತು ವರ್ಷದ ಆಟಗಾರ ಸಮಗ್ರ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂರು ಪ್ರಶಸ್ತಿಗಳನ್ನು ಏಕಕಾಲಕ್ಕೆ ಪಡೆದ ಪ್ರಥಮ ಕ್ರಿಕೆಟಿಗನೆಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

2018ರಲ್ಲಿ ಅವರು ಮಾಡಿದ ಸಾಧನೆಗೆ ಸರ್ ಗ್ಯಾರ್‌ಫೀಲ್ಡ್ ಸೋಬರ್ಸ್ ಟ್ರೋಫಿಯನ್ನು ಗೆದ್ದಿದ್ದಾರೆ. ಈ ಪ್ರಶಸ್ತಿಯನ್ನು ಸತತ ಎರಡನೇ ಬಾರಿ ಗಳಿಸಿದ್ದಾರೆ. ಯುವ ವಿಕೆಟ್‌ಕೀಪರ್ ರಿಷಭ್ ಪಂತ್ ಅವರು ಉದಯೋನ್ಮುಖ ಆಟಗಾರ ಪ್ರಶಸ್ತಿ ಗಳಿಸಿದ್ದಾರೆ.

ಐಸಿಸಿ ತಂಡಗಳಿಗೆ ಕೊಹ್ಲಿ ನಾಯಕ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಐಸಿಸಿ ಟೆಸ್ಟ್ ಮತ್ತು ಏಕದಿನ ತಂಡಗಳಿಗೆ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT