ಗುರುವಾರ , ಅಕ್ಟೋಬರ್ 1, 2020
20 °C
2022ರಲ್ಲಿ ಪುರುಷ–ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿ

ಐಸಿಸಿ ಸಭೆ: ಮುಂದಿನ ವರ್ಷ ಭಾರತದಲ್ಲಿ ಟಿ20 ವಿಶ್ವಕಪ್

ಪಿಟಿಐ Updated:

ಅಕ್ಷರ ಗಾತ್ರ : | |

ಸೌರವ್ ಗಂಗೂಲಿ

ದುಬೈ: ಮೊದಲೇ ನಿರ್ಧಾರ ವಾಗಿರುವ ವೇಳಾಪಟ್ಟಿಯಂತೆ ಮುಂದಿನ ವರ್ಷವೇ ಭಾರತವು ಟ್ವೆಂಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಆತಿಥ್ಯ ವಹಿಸಲಿದೆ.

ಆಸ್ಟ್ರೇಲಿಯಾದಲ್ಲಿ ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿಯನ್ನು 2022ರಲ್ಲಿ ಆಯೋಜಿಸಲು ಕ್ರಿಕೆಟ್ ಆಸ್ಟ್ರೇ ಲಿಯಾಕ್ಕೆ ಅನುಮತಿ ನೀಡಲಾಗಿದೆ. ಇದರೊಂದಿಗೆ 2021ರಲ್ಲಿ ಎರಡು ಟಿ20 ವಿಶ್ವಕಪ್ ಟೂರ್ನಿಗಳು ನಡೆಯುವ ಕುರಿತು ಇದ್ದ ಊಹಾಪೋಹಗಳಿಗೆ ತೆರೆಬಿದ್ದಂತಾಗಿದೆ.

ಶುಕ್ರವಾರ ನಡೆದ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಈ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಮುಂದಿನ ವರ್ಷ ನ್ಯೂಜಿಲೆಂಡ್‌ ನಲ್ಲಿ ನಡೆಯಲಿದ್ದ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯನ್ನೂ ಒಂದು ವರ್ಷ ಮುಂದೂಡಲಾಗಿದೆ. ವಿಶ್ವದೆಲ್ಲೆಡೆ ಕೊರೊನಾ ವೈರಸ್‌ ಸೋಂಕು ಹರಡಿರುವುದರಿಂದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು