ಮಂಗಳವಾರ, ಸೆಪ್ಟೆಂಬರ್ 29, 2020
22 °C

ಮುಖ್ಯಸ್ಥರ ಆಯ್ಕೆ: ಇಂದು ಐಸಿಸಿ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ (ಐಸಿಸಿ) ಮಂಡಳಿ ಸಭೆ ಸೋಮವಾರ ನಡೆಯಲಿದ್ದು ಮುಖ್ಯಸ್ಥರ ಆಯ್ಕೆಗೆ ಸಂಬಂಧಿಸಿ ನಾಮಪತ್ರ ಸಲ್ಲಿಕೆ ಚಟುವಟಿಕೆಗೆ ಅಂತಿಮ ರೂಪ ನೀಡಲಿದೆ.

ಆನ್‌ಲೈನ್ ಮೂಲಕ ನಡೆಯಲಿರುವ ಸಭೆಯ ಕಾರ್ಯಸೂಚಿಯಲ್ಲಿ ಈ ಒಂದಂಶ ಮಾತ್ರ ಇದ್ದು ಚುನಾವಣೆಯಾಗಲಿ, ಅವಿರೋಧ ಆಯ್ಕೆಯಾಗಲಿ ನಾಲ್ಕು ವಾರಗಳ ಒಳಗೆ ನಡೆಸಲು ಐಸಿಸಿ ನಿರ್ಧರಿಸಿದೆ ಎನ್ನಲಾಗಿದೆ.

‘ನಾಮಪತ್ರ ಸಲ್ಲಿಕೆಗೆ ಎರಡು ವಾರಗಳ ಕಾಲ ಅವಕಾಶ ನೀಡುವ ಸಾಧ್ಯತೆ ಇದೆ. ಈ ಬಾರಿ ಮುಖ್ಯಸ್ಥರ ಆಯ್ಕೆಗೆ ಸರಳ ಬಹುಮತ ಪರಿಗಣಿಸಲು ಅವಕಾಶ ನೀಡುವಂತೆ 17 ಸದಸ್ಯರ ಮಂಡಳಿ ಆಗ್ರಹಿಸಿದೆ’ ಎಂದು ಸದಸ್ಯರೊಬ್ಬರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು