ಭಾನುವಾರ, ಜೂಲೈ 5, 2020
27 °C

ಟ್ವೆಂಟಿ–20 ವಿಶ್ವಕಪ್ 2022ಕ್ಕೆ ಮುಂದೂಡಿಕೆ ಸಾಧ್ಯತೆ: ಅಕ್ಟೋಬರ್‌ನಲ್ಲಿ IPL?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಈ ವರ್ಷ ಆ‌ಸ್ಟ್ರೇಲಿಯಾದಲ್ಲಿ ನಡೆಯಬೇಕಾಗಿರುವ ಟ್ವೆಂಟಿ–20 ವಿಶ್ವಕಪ್ ಟೂರ್ನಿಯನ್ನು 2022ನೇ ವರ್ಷಕ್ಕೆ ಮುಂದೂಡುವ ಸಾಧ್ಯತೆಗಳಿವೆ.

ಆದಾಗ್ಯೂ ಇದೇ ಅಕ್ಟೋಬರ್‌ನಲ್ಲಿ ಐಪಿಎಲ್‌ ಟೂರ್ನಿ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಟ್ವೆಂಟಿ–20 ವಿಶ್ವಕಪ್ ಟೂರ್ನಿ ಮುಂದೂಡುವುದು ಹಾಗೂ ಅಕ್ಟೋಬರ್‌ನಲ್ಲಿ ಐಪಿಎಲ್‌ ಟೂರ್ನಿ ನಡೆಸುವ ಬಗ್ಗೆ ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದ್ದು ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಇದೆ ಎಂದು ಐಸಿಸಿಯ ಉನ್ನತ ಮೂಲಗಳು ತಿಳಿಸಿವೆ.

ಗುರುವಾರ ಐಸಿಸಿಯ ಮಂಡಳಿ ಸಭೆ ನಡೆಯಲಿದ್ದು. ಇದರಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ವಿಶ್ವಕಪ್ ಟೂರ್ನಿಯನ್ನು ಮುಂದೂಡುವುದು ನಿಚ್ಚಳವಾಗಿದೆ ಎನ್ನಲಾಗಿದೆ.

ಈ ಪರಿಸ್ಥಿತಿಯಲ್ಲಿ ಟೂರ್ನಿ ನಡೆಯುವ ಸಾಧ್ಯತೆಗಳು ತುಂಬಾ ಕಡಿಮೆ, ಕ್ರಿಕೆಟ್ ಆ‌ಸ್ಟ್ರೇಲಿಯಾ ಸೇರಿದಂತೆ ಇತರೆ ಕ್ರಿಕೆಟ್‌ ಮಂಡಳಿಗಳೂ ಟೂರ್ನಿ ನಡೆಸುವ ಬಗ್ಗೆ ತೀರ್ಮಾನ ಮಾಡಲಾರವು ಎಂದು ಐಸಿಸಿಯ ಸದಸ್ಯರೊಬ್ಬರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು