ಬೆಂಗಳೂರು: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ವೇಳಾಪಟ್ಟಿ ಪ್ರಕಟಗೊಂಡಿದೆ.

ಮುಂದಿನ ವರ್ಷ ಫೆಬ್ರುವರಿ 10ರಿಂದ ಮಾರ್ಚ್ 10ರವರೆಗೆ ಪಂದ್ಯಗಳು ನಡೆಯಲಿವೆ.

ಭಾರತ ಮತ್ತು ಪಾಕಿಸ್ತಾನ ಎ ಗುಂಪಿನಲ್ಲಿದ್ದು, ಫೆಬ್ರುವರಿ 23 ರಂದು ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಆಡಲಿರರುವ ಎಲ್ಲ ಪಂದ್ಯಗಳು ದುಬೈನಲ್ಲಿ ನಡೆಯಲಿವೆ.

ಮಾರ್ಚ್4 ರಂದು ದುಬೈನಲ್ಲಿ ಮೊದಲ ಸೆಮಿಫೈನಲ್, ಮಾರ್ಚ್ 5ರಂದು ಲಾಹೋರ್ನಲ್ಲಿ 2ನೇ ಸೆಮಿಫೈನಲ್ ನಡೆಯಲಿದೆ. ಮಾರ್ಚ್ 9ರಂದು ಫೈನಲ್ ಪಂದ್ಯ ಲಾಹೋರ್ನಲ್ಲಿ ನಡೆಯಲಿದೆ.

ಭಾರತ ಅರ್ಹತೆ ಪಡೆದರೆ ಮೊದಲ ಸೆಮಿಫೈನಲ್ನಲ್ಲಿ ಆಡಲಿದೆ. ಪಾಕಿಸ್ತಾನ ಕ್ವಾಲಿಫೈ ಆದರೆ 2ನೇ ಸೆಮಿಫೈನಲ್ ಪಂದ್ಯದಲ್ಲಿ ಆಡಲಿದೆ. ಭಾರತ ಕ್ವಾಲಿಫೈ ಆದರೆ ಫೈನಲ್ ಪಂದ್ಯ ದುಬೈನಲ್ಲಿ ನಡೆಯಲಿದೆ.

ರಾಜತಾಂತ್ರಿಕ ಕಾರಣಗಳಿಗಾಗಿ ಭಾರತ ತಂಡಕ್ಕೆ ಪಾಕಿಸ್ತಾನದಲ್ಲಿ ಆಡಲು ಕೇಂದ್ರಸರ್ಕಾರದಿಂದ ಅನುಮತಿ ದೊರೆತಿಲ್ಲ. ಆದ್ದರಿಂದ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಯಲಿದೆ. ಹೋದ ವರ್ಷ ಭಾರತದ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆದ ಸಂದರ್ಭದಲ್ಲಿ ಪಾಕಿಸ್ತಾನ ತಂಡವು ಆಡಿತ್ತು.

ಗುಂಪುಗಳು

ಗುಂಪು ಎ: ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್, ಬಾಂಗ್ಲಾದೇಶ

ಗುಂಪು ಬಿ: ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಗಾನಿಸ್ತಾನ, ಇಂಗ್ಲೆಂಡ್

ವೇಳಾಪಟ್ಟಿ

19 ಫೆಬ್ರುವರಿd: ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್,: ಕರಾಚಿ

20 ಫೆಬ್ರುವರಿ: ಬಾಂಗ್ಲಾದೇಶ ವಿರುದ್ಧ ಭಾರತ, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ದುಬೈ

21 ಫೆಬ್ರುವರಿ - ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ, ನ್ಯಾಷನಲ್ ಸ್ಟೇಡಿಯಂ, ಕರಾಚಿ

22 ಫೆಬ್ರುವರಿ - ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್, ಗಡಾಫಿ ಸ್ಟೇಡಿಯಂ, ಲಾಹೋರ್

23 ಫೆಬ್ರುವರಿ - ಪಾಕಿಸ್ತಾನ ವಿರುದ್ಧ ಭಾರತ, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ದುಬೈ

24 ಫೆಬ್ರುವರಿ - ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್, ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ

25 ಫೆಬ್ರುವರಿ - ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ, ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ

26 ಫೆಬ್ರುವರಿ - ಅಫ್ಘಾನಿಸ್ತಾನ ವಿರುದ್ಧ ಇಂಗ್ಲೆಂಡ್, ಗಡಾಫಿ ಸ್ಟೇಡಿಯಂ, ಲಾಹೋರ್

27 ಫೆಬ್ರುವರಿ - ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶ, ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ

28 ಫೆಬ್ರುವರಿ - ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ, ಗಡಾಫಿ ಕ್ರೀಡಾಂಗಣ, ಲಾಹೋರ್

1 ಮಾರ್ಚ್ - ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್, ನ್ಯಾಷನಲ್ ಸ್ಟೇಡಿಯಂ, ಕರಾಚಿ

2 ಮಾರ್ಚ್ - ನ್ಯೂಜಿಲೆಂಡ್ ವಿರುದ್ಧ ಭಾರತ, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ದುಬೈ

4 ಮಾರ್ಚ್ - ಮೊದಲ ಸೆಮಿಫೈನಲ್, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ದುಬೈ

5 ಮಾರ್ಚ್ - ಎರಡನೇ ಸೆಮಿಫೈನಲ್, ಗಡಾಫಿ ಸ್ಟೇಡಿಯಂ, ಲಾಹೋರ್

9 ಮಾರ್ಚ್ - ಫೈನಲ್ - ಗಡಾಫಿ ಸ್ಟೇಡಿಯಂ, ಲಾಹೋರ್ (ಭಾರತ ಅರ್ಹತೆ ಪಡೆದರೆ ದುಬೈ).

10 ಮಾರ್ಚ್: ಮೀಸಲು ದಿನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.