ಟ್ರೆಂಟ್‌ಬ್ರಿಜ್‌ ಅಂಗಳ: ಪಾಕ್‌ ಎದುರು 444 ರನ್‌ ಗಳಿಸಿದ್ದ ಇಂಗ್ಲೆಂಡ್‌; ಇಂದು?

ಬುಧವಾರ, ಜೂನ್ 19, 2019
25 °C
ವಿಶ್ವಕಪ್‌ ಕ್ರಿಕೆಟ್‌

ಟ್ರೆಂಟ್‌ಬ್ರಿಜ್‌ ಅಂಗಳ: ಪಾಕ್‌ ಎದುರು 444 ರನ್‌ ಗಳಿಸಿದ್ದ ಇಂಗ್ಲೆಂಡ್‌; ಇಂದು?

Published:
Updated:

ನಾಟಿಂಗಂ: ಟ್ರೆಂಟ್‌ಬ್ರಿಜ್‌ನಲ್ಲಿ ಇಂಗ್ಲೆಂಡ್‌ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಆರಂಭವಾಗಿದೆ. ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ವಿಂಡೀಸ್‌ ಎದುರು ಬ್ಯಾಟಿಂಗ್‌ ವೈಫಲ್ಯ ಕಂಡಿದ್ದ ಸರ್ಫರಾಜ್‌ ಅಹಮದ್‌ ಬಳಗವು ದಿಟ್ಟ ಹೋರಾಟ ನಡೆಸುವ ಆತ್ಮವಿಶ್ವಾಸದಲ್ಲಿದೆ. 

ಕ್ಷಣಕ್ಷಣದ ಸ್ಕೋರ್‌: https://bit.ly/2QFwVtL

ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾವನ್ನು ಮಣಿಸಿ ವಿಶ್ವಾಸ ಹೆಚ್ಚಿಸಿಕೊಂಡಿರುವ ಏಯಾನ್‌ ಮಾರ್ಗನ್‌ ನೇತೃತ್ವದ ಇಂಗ್ಲೆಂಡ್‌ ತಂಡವು ಈಗ ಮತ್ತೊಂದು ಗೆಲುವಿನ ಮೇಲೆ ಕಣ್ಣಿಟ್ಟಿದೆ. ಟ್ರೆಂಟ್‌ಬ್ರಿಜ್‌, ಇಂಗ್ಲೆಂಡ್‌ ಪಾಲಿನ ಅದೃಷ್ಟದ ಅಂಗಳ. ಈ ಮೈದಾನದಲ್ಲಿ ಆಡಿರುವ ಎರಡು ವಿಶ್ವಕಪ್‌ ಪಂದ್ಯಗಳಲ್ಲೂ ಆಂಗ್ಲರ ನಾಡಿನ ತಂಡವು ಗೆಲುವಿನ ಸಿಹಿ ಸವಿದಿದೆ.

2016 ಆಗಸ್ಟ್‌ 30ರಂದು ನಡೆದಿದ್ದ ಪಾಕಿಸ್ತಾನ ಎದುರಿನ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್‌ 50 ಓವರ್‌ಗಳಲ್ಲಿ 3 ವಿಕೆಟ್‌ಗೆ 444ರನ್‌ ಗಳಿಸಿ ವಿಶ್ವದಾಖಲೆ ನಿರ್ಮಿಸಿತ್ತು. ಇದೇ ಅಂಗಳದಲ್ಲಿ 2018 ಜೂನ್‌ 19ರಂದು ಆಯೋಜನೆಯಾಗಿದ್ದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 50 ಓವರ್‌ಗಳಲ್ಲಿ 6 ವಿಕೆಟ್‌ಗೆ 481ರನ್‌ ಕಲೆಹಾಕಿ ವಿಶ್ವ ದಾಖಲೆಯನ್ನು ಉತ್ತಮ ಪಡಿಸಿಕೊಂಡಿತ್ತು.

ಬ್ಯಾಟ್ಸ್‌ಮನ್‌ಗಳ ಪಾಲಿನ ಸ್ವರ್ಗ ಎನಿಸಿರುವ ಈ ಅಂಗಳದಲ್ಲಿ ಸೋಮವಾರವೂ ರನ್‌ ಹೊಳೆ ಹರಿಯುವ ನಿರೀಕ್ಷೆ ಇದೆ. ಗಾಯದಿಂದ ಚೇತರಿಸಿಕೊಂಡಿರುವ ಇಂಗ್ಲೆಂಡ್‌ ತಂಡದ ಮಾರ್ಕ್‌ ವುಡ್‌ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !