ಧರ್ಮಶಾಲಾ : ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ಕೈಯಲ್ಲಿ ಎದುರಾಗಿದ್ದ ಸೋಲಿನ ಆಘಾತದಿಂದ ಹೊರಬರುವ ಪ್ರಯತ್ನದಲ್ಲಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ, ಮಂಗಳವಾರ ಇಲ್ಲಿ ಬಾಂಗ್ಲಾದೇಶ ವಿರುದ್ಧ ಹಣಾಹಣಿ ನಡೆಸಲಿದೆ.
ನ್ಯೂಜಿಲೆಂಡ್ ಎದುರು ಅನುಭವಿಸಿದ್ದ 9 ವಿಕೆಟ್‌ಗಳ ಸೋಲು ಇಂಗ್ಲೆಂಡ್‌ಗೆ ಟೂರ್ನಿಯ ಆರಂಭದಲ್ಲೇ ಎಚ್ಚರಿಕೆಯನ್ನು ನೀಡಿದೆ. ಆದ್ದರಿಂದ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ತಂಡದ ಆಟಗಾರರು ಪುಟಿದೆದ್ದು ನಿಲ್ಲುವರು ಎಂಬ ವಿಶ್ವಾಸವನ್ನು ನಾಯಕ ಜೋಸ್ ಬಟ್ಲರ್ ಹೊಂದಿದ್ದಾರೆ.
ಅಹಮದಾಬಾದ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಇಂಗ್ಲೆಂಡ್ 282 ರನ್ ಪೇರಿಸಿತ್ತು. ಡೆವೊನ್ ಕಾನ್ವೆ ಮತ್ತು ರಚಿನ್ ರವೀಂದ್ರ ಅವರ ಅಬ್ಬರದ ಶತಕದ ನೆರವಿನಿಂದ ನ್ಯೂಜಿಲೆಂಡ್, 37 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತ್ತು.
ಕಿವೀಸ್ ಬ್ಯಾಟರ್‌ಗಳು ಇಂಗ್ಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ್ದರು. ನ್ಯೂಜಿಲೆಂಡ್‌ನ ವೇಗಿಗಳಾದ ಟ್ರೆಂಟ್ ಬೌಲ್ಟ್, ಮ್ಯಾಟ್ ಹೆನ್ರಿ ಅವರು ಇಂಗ್ಲೆಂಡ್ ಬ್ಯಾಟರ್‌ಗಳಿಗೆ ಕಡಿವಾಣ ತೊಡಿಸಿದ್ದರು. ಆದರೆ ಅದೇ ಪಿಚ್‌ನಲ್ಲಿ ಇಂಗ್ಲೆಂಡ್‌ನ ಬೌಲರ್‌ಗಳಾದ ಕ್ರಿಸ್ ವೋಕ್ಸ್, ಮಾರ್ಕ್ ವುಡ್ ಮತ್ತು ಸ್ಯಾಮ್ ಕರನ್ ಅವರು ಪ್ರಭಾವಿ ಎನಿಸಿರಲಿಲ್ಲ. ಕಾನ್ವೆ ಮತ್ತು ರಚಿನ್ ಮುರಿಯದ ಎರಡನೇ ವಿಕೆಟ್‌ಗೆ 272 ರನ್‌ಗಳ ಜತೆಯಾಟ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.