ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಕ್ರಿಕೆಟ್‌ ಏಕದಿನ ರ‍್ಯಾಂಕಿಂಗ್‌: ಜಂಟಿ ಅಗ್ರಸ್ಥಾನದಲ್ಲಿ ಮಿಥಾಲಿ-ಲಿಜೆಲಿ

Last Updated 14 ಸೆಪ್ಟೆಂಬರ್ 2021, 11:15 IST
ಅಕ್ಷರ ಗಾತ್ರ

ದುಬೈ: ಭಾರತ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್ ಅವರು ಏಕದಿನ ಬ್ಯಾಟಿಂಗ್‌ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಬ್ಯಾಟರ್‌ ಲಿಜೆಲಿ ಲೀ ಅವರು ಮಿಥಾಲಿ ಅವರೊಂದಿಗೆ ಮೊದಲ ಸ್ಥಾನಕ್ಕೇರಿದ್ದಾರೆ.

ವೆಸ್ಟ್ ಇಂಡೀಸ್‌ ಎದುರಿನ ಸರಣಿ ಮೊದಲ ಪಂದ್ಯದಲ್ಲಿ ಲಿಜೆಲಿ ಔಟಾಗದೆ 91 ರನ್‌ ಗಳಿಸಿದ್ದರು. ಇದು ಅವರ ಕ್ರಮಾಂಕದಲ್ಲಿ ಬಡ್ತಿಗೆ ಕಾರಣವಾಗಿದೆ. ಮಿಥಾಲಿ ಹಾಗೂ ಲೀ ಅವರ ಬಳಿ ಸದ್ಯ ತಲಾ 762 ರೇಟಿಂಗ್ ಪಾಯಿಂಟ್‌ಗಳಿವೆ. ಆಸ್ಟ್ರೇಲಿಯಾದ ಅಲಿಸಾ ಹೀಲಿ ಮೂರನೇ ಸ್ಥಾನದಲ್ಲಿದ್ದರೆ, ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಒಂಬತ್ತನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ.

ಲೀ ಅವರು 2018ರ ಜೂನ್‌ನಲ್ಲಿ ಮೊದಲ ಬಾರಿ ಅಗ್ರಸ್ಥಾನದಲ್ಲಿದ್ದರು. ಈ ವರ್ಷದ ಮಾರ್ಚ್‌ನಲ್ಲಿ ಮತ್ತೆ ಮೊದಲ ಸ್ಥಾನಕ್ಕೆ ಏರಿದ್ದರು.

ಭಾರತದ ಅನುಭವಿ ವೇಗಿ ಜೂಲನ್ ಗೋಸ್ವಾಮಿ ಮತ್ತು ಸ್ಪಿನ್ನರ್ ಪೂನಂ ಯಾದವ್ ಬೌಲರ್‌ಗಳಲ್ಲಿ ಕ್ರಮವಾಗಿ ಐದನೇ ಮತ್ತು ಒಂಬತ್ತನೇ ಸ್ಥಾನದಲ್ಲಿದ್ದಾರೆ.ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ದೀಪ್ತಿ ಶರ್ಮಾ ಐದನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಲಿಜೆಲಿ ಲೀ –ಟ್ವಿಟರ್ ಚಿತ್ರ
ಲಿಜೆಲಿ ಲೀ –ಟ್ವಿಟರ್ ಚಿತ್ರ

ಟಿ–20 ಕ್ರಮಾಂಕದಲ್ಲಿ ಭಾರತದ ಶೆಫಾಲಿ ವರ್ಮಾ 759 ಪಾಯಿಂಟ್ಸ್‌ನೊಂದಿಗೆ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಅವರು ಆಸ್ಟ್ರೇಲಿಯಾದ ಬೆಥ್ ಮೂನಿ (744) ಮತ್ತು ಭಾರತ ಟಿ–20 ತಡಂಡದ ಉಪನಾಯಕಿ ಮಂದಾನ (716) ಅವರನ್ನು ಹಿಂದಿಕ್ಕಿದ್ದಾರೆ.

ಟಿ20 ಬೌಲರ್‌ಗಳ ವಿಭಾಗದಲ್ಲಿ ದೀಪ್ತಿ (ಆರನೇ ಸ್ಥಾನ) ಮತ್ತು ಪೂನಂ (ಎಂಟನೇ) ಸ್ಥಾನಗಳಲ್ಲಿ ಬದಲಾವಣೆ ಆಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT