ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ICC Test Rankings: ಆ್ಯಂಡರ್ಸನ್ ಹಿಂದಿಕ್ಕಿದ ಅಶ್ವಿನ್ ನಂ.1

Last Updated 1 ಮಾರ್ಚ್ 2023, 9:58 IST
ಅಕ್ಷರ ಗಾತ್ರ

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಇಂಗ್ಲೆಂಡ್‌ನ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಹಿಂದಿಕ್ಕಿರುವ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ನಂ.1 ಸ್ಥಾನ ಅಲಂಕರಿಸಿದ್ದಾರೆ.

36 ವರ್ಷದ ಅಶ್ವಿನ್, ಆಸ್ಟ್ರೇಲಿಯಾ ವಿರುದ್ಧ ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆರು ವಿಕೆಟ್ ಕಬಳಿಸಿದ್ದರು.

ಮತ್ತೊಂದೆಡೆ ಆ್ಯಂಡರ್ಸನ್‌ಗೆ ಹಿನ್ನಡೆಯಾಗಿದ್ದು, ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ವೆಲ್ಲಿಂಗ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಒಂದು ರನ್ ಅಂತರದ ಗೆಲುವು ದಾಖಲಿಸಿದ್ದ ನ್ಯೂಜಿಲೆಂಡ್ ಸರಣಿ ಸಮಬಲಗೊಳಿಸಿತ್ತು.

ಪ್ರಸ್ತುತ ಅಶ್ವಿನ್ 864 ಮತ್ತು ಆ್ಯಂಡರ್ಸನ್ 859 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ (858) ಮೂರನೇ ಸ್ಥಾನದಲ್ಲಿದ್ದಾರೆ.

ಗಾಯದಿಂದಾಗಿ ಹೊರಗುಳಿದಿರುವ ಜಸ್‌ಪ್ರೀತ್ ಬೂಮ್ರಾ (795) ನಾಲ್ಕನೇ ಸ್ಥಾನದಲ್ಲಿದ್ದಾರೆ.

2015ರಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ನಂ.1 ಬೌಲರ್ ಆಗಿ ಹೊರಹೊಮ್ಮಿದ್ದರು. ಅಲ್ಲಿಂದ ಬಳಿಕ ಹಲವು ಬಾರಿ ಅಗ್ರಸ್ಥಾನ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT