ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಏಕದಿನ ರ‍್ಯಾಂಕಿಂಗ್‌: ಕೊಹ್ಲಿ, ಬೂಮ್ರಾ ಸ್ಥಾನಕ್ಕಿಲ್ಲ ಧಕ್ಕೆ

ಜಾಧವ್‌ ಶ್ರೇಷ್ಠ ಸಾಧನೆ
Last Updated 17 ಮಾರ್ಚ್ 2019, 20:15 IST
ಅಕ್ಷರ ಗಾತ್ರ

ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗದ ಬೌಲರ್‌ ಜಸ್‌ಪ್ರೀತ್ ಬೂಮ್ರಾ ಅವರು ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ. ಭಾನುವಾರ ಬಿಡುಗಡೆಗೊಂಡಿರುವ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ಎರಡನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ರಾಸ್ ಟೇಲರ್‌ ಇದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ 310 ರನ್‌ ಸೇರಿಸಿದ್ದರು. ರೋಹಿತ್ ಶರ್ಮಾ 202 ರನ್‌ ಕಲೆ ಹಾಕಿದ್ದರು. ಸರಣಿಯಲ್ಲಿ ಆಲ್‌ರೌಂಡ್‌ ಸಾಮರ್ಥ್ಯ ತೋರಿದ ಕೇದಾರ್ ಜಾಧವ್ ಒಟ್ಟು 11 ಸ್ಥಾನಗಳ ಏರಿಕೆ ಕಂಡಿದ್ದು 24ನೇ ಸ್ಥಾನ ತಲುಪಿದ್ದಾರೆ. ಇದು ಅವರ ಜೀವನಶ್ರೇಷ್ಠ ಸಾಧನೆಯಾಗಿದೆ.

ಶ್ರೀಲಂಕಾ ಎದುರು ನಡೆದ ಸರಣಿ ಯಲ್ಲಿ 5–0 ಅಂತರದ ಗೆಲುವು ಸಾಧಿ ಸಿದ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ ಕ್ವಿಂಟನ್ ಡಿ ಕಾಕ್‌ ನಾಲ್ಕನೇ ಸ್ಥಾನ ಗಳಿಸಿದ್ದಾರೆ. ಸರಣಿಯಲ್ಲಿ ಅವರು ಒಟ್ಟು 353 ರನ್‌ ಗಳಿಸಿದ್ದರು. ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಸಿಡಿಸಿರುವ ಅವರು ಸರಣಿಯ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡಿದ್ದರು.

ಬೂಮ್ರಾ ಮೊದಲಿಗ: ಬೌಲರ್‌ಗಳ ಪಟ್ಟಿಯಲ್ಲಿ ಜಸ್‌ಪ್ರೀತ್ ಬೂಮ್ರಾ 774 ಪಾಯಿಂಟ್ ಕಲೆ ಹಾಕಿ ಮೊದಲ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಒಂದು ಸ್ಥಾನದ ಏರಿಕೆ ಕಂಡಿರುವ ನ್ಯೂಜಿಲೆಂಡ್‌ನ ವೇಗಿ ಟ್ರೆಂಟ್ ಬೌಲ್ಟ್‌ ಎರಡನೇ ಸ್ಥಾನ ಗಳಿಸಿದ್ದಾರೆ. ಬಾಂಗ್ಲಾದೇಶ ಎದುರಿನ ಸರಣಿಯಲ್ಲಿ ಅವರು ಆರು ವಿಕೆಟ್ ಕಬಳಿಸಿದ್ದರು. ಎರಡನೇ ಸ್ಥಾನದಲ್ಲಿದ್ದ ಅಪ್ಗಾನಿಸ್ಥಾನದ ರಶೀದ್ ಖಾನ್‌ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಏಳು ಸ್ಥಾನಗಳ ಏರಿಕೆಯೊಂದಿಗೆ ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಇಮ್ರಾನ್ ತಾಹಿರ್‌ ನಾಲ್ಕನೆಯವರಾಗಿದ್ದಾರೆ. ಲಂಕಾ ವಿರುದ್ಧದ ಸರಣಿಯಲ್ಲಿ ಅವರು ಒಂಬತ್ತು ವಿಕೆಟ್ ಉರುಳಿಸಿದ್ದರು.

ಆಲ್‌ರೌಂಡರ್‌ಗಳ ಪಟ್ಟಿಯ ಅಗ್ರ ಐದರಲ್ಲಿ ಭಾರತೀಯ ಆಟಗಾರರಿಗೆ ಸ್ಥಾನವಿಲ್ಲ. ಮೊದಲ ಸ್ಥಾನದಲ್ಲಿ ರಶೀದ್ ಖಾನ್‌ ಇದ್ದಾರೆ. ತಂಡಗಳ ಪಟ್ಟಿಯಲ್ಲಿ ಇಂಗ್ಲೆಂಡ್ ಮತ್ತು ಭಾರತ ಕ್ರಮವಾಗಿ ಮೊದಲ ಎರಡು ಸ್ಥಾನಗಳನ್ನು ಗಳಿಸಿವೆ. ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕಿರುವ ನ್ಯೂಜಿಲೆಂಡ್ ಮೂರನೇ ಸ್ಥಾನ ಗಳಿಸಿದೆ. ‍ಪಾಕಿಸ್ತಾನವನ್ನು ಆರನೇ ಸ್ಥಾನಕ್ಕೆ ತಳ್ಳಿ ಆಸ್ಟ್ರೇಲಿಯಾ ಐದನೇ ಸ್ಥಾನಕ್ಕೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT