ಮಂಗಳವಾರ, ಮೇ 18, 2021
30 °C

ಟೆಸ್ಟ್‌ ರ‍್ಯಾಂಕಿಂಗ್‌: ಅಗ್ರಪಟ್ಟದಲ್ಲಿ ವಿರಾಟ್‌, ನಾಲ್ಕನೇ ಸ್ಥಾನದಲ್ಲಿ ಪೂಜಾರ

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಭಾರತದ ಟೆಸ್ಟ್‌ ‍ಪರಿಣತ ಬ್ಯಾಟ್ಸ್‌ಮನ್‌ ಚೇತೇಶ್ವರ ಪೂಜಾರ, ಮಂಗಳವಾರ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

ಅಡಿಲೇಡ್‌ನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಪೂಜಾರ ಮಿಂಚಿದ್ದರು. ಮೊದಲ ಇನಿಂಗ್ಸ್‌ನಲ್ಲಿ ಶತಕ (123) ಸಿಡಿಸಿದ್ದ ಅವರು ಎರಡನೇ ಇನಿಂಗ್ಸ್‌ನಲ್ಲಿ 71ರನ್‌ ಗಳಿಸಿ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಈ ಮೂಲಕ ಒಟ್ಟು ರ‍್ಯಾಂಕಿಂಗ್‌ ಪಾಯಿಂಟ್ಸ್‌ ಅನ್ನು 846ಕ್ಕೆ ಹೆಚ್ಚಿಸಿಕೊಂಡಿರುವ ಅವರು ಇಂಗ್ಲೆಂಡ್‌ನ ಜೋ ರೂಟ್‌ ಅವರನ್ನು ಹಿಂದಿಕ್ಕಿದ್ದಾರೆ. ರೂಟ್‌, ಮೊದಲು ನಾಲ್ಕನೇ ಸ್ಥಾನ ಹೊಂದಿದ್ದರು.

ನ್ಯೂಜಿಲೆಂಡ್‌ ತಂಡದ ಕೇನ್‌ ವಿಲಿಯಮ್ಸನ್‌ ಅವರು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ಎದುರಿನ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಶತಕ ಬಾರಿಸಿದ್ದ ಅವರು ಒಟ್ಟು ರ‍್ಯಾಂಕಿಂಗ್‌ ಪಾಯಿಂಟ್ಸ್‌ ಅನ್ನು 901ಕ್ಕೆ ಹೆಚ್ಚಿಸಿಕೊಂಡಿದ್ದಾರೆ. ಈ ಮೂಲಕ 900ಕ್ಕೂ ಹೆಚ್ಚು ರ‍್ಯಾಂಕಿಂಗ್‌ ಪಾಯಿಂಟ್ಸ್‌ ಕಲೆಹಾಕಿದ ನ್ಯೂಜಿಲೆಂಡ್‌ನ ಮೊದಲ ಬ್ಯಾಟ್ಸ್‌ಮನ್‌ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಸ್ಟ್ರೇಲಿಯಾ ಎದುರಿನ ಮೊದಲ ಟೆಸ್ಟ್‌ನಲ್ಲಿ ರನ್‌ ಗಳಿಸಲು ಪರದಾಡಿದ್ದ ಕೊಹ್ಲಿ 15 ರ‍್ಯಾಂಕಿಂಗ್‌ ಪಾಯಿಂಟ್ಸ್‌ ಕಳೆದುಕೊಂಡಿದ್ದಾರೆ. ಅಜಿಂಕ್ಯ ರಹಾನೆ 17ನೇ ಸ್ಥಾನಕ್ಕೆ ಪ್ರಗತಿ ಕಂಡಿದ್ದಾರೆ. ಅವರು ಎರಡು ಸ್ಥಾನ ಬಡ್ತಿ ಹೊಂದಿದ್ದಾರೆ.

ಬೂಮ್ರಾ ವೈಯಕ್ತಿಕ ಶ್ರೇಷ್ಠ ಸಾಧನೆ: ಬೌಲರ್‌ಗಳ ಪಟ್ಟಿಯಲ್ಲಿ ಜಸ್‌ಪ್ರೀತ್‌ ಬೂಮ್ರಾ 33ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ಇದು ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ. ಅವರು ಐದು ಸ್ಥಾನ ಪ್ರಗತಿ ಕಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು