ಶನಿವಾರ, ಮಾರ್ಚ್ 28, 2020
19 °C

ಟೆಸ್ಟ್ ಕ್ರಿಕೆಟ್ ರ‍್ಯಾಂಕಿಂಗ್‌: ಅಗ್ರಸ್ಥಾನದಲ್ಲೇ ಉಳಿದ ಭಾರತ

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ನ್ಯೂಜಿಲೆಂಡ್‌ ವಿರುದ್ಧ ಎರಡು ಟೆಸ್ಟ್‌ಗಳ ಸರಣಿಯಲ್ಲಿ ಮುಖಭಂಗ ಅನುಭವಿಸಿದರೂ, ಭಾರತ ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ಅಗ್ರಪಟ್ಟವನ್ನು ಉಳಿಸಿಕೊಂಡಿದೆ. ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದರೂ, ಬ್ಯಾಟ್ಸಮನ್ನರ ಪಟ್ಟಿಯಲ್ಲಿ ನಾಯಕ ವಿರಾಟ್‌ ಕೊಹ್ಲಿ ಅವರು ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಭಾರತ 116 ರೇಟಿಂಗ್‌ ಪಾಯಿಂಟ್ಸ್‌ ಸಂಗ್ರಹಿಸಿದೆ. ಇದು ಎರಡನೇ ಸ್ಥಾನದ ಲ್ಲಿರುವ ನ್ಯೂಜಿಲೆಂಡ್‌ಗಿಂತ ಆರು ಪಾಯಿಂಟ್‌ ಹೆಚ್ಚು. ಆಸ್ಟ್ರೇಲಿಯಾ 108 ಪಾಯಿಂಟ್‌ಗಳೊಡನೆ ಮೂರನೇ ಸ್ಥಾನದಲ್ಲಿದೆ.  ಕೊಹ್ಲಿ, ನ್ಯೂಜಿಲೆಂಡ್‌ ವಿರುದ್ಧ ಸರಣಿಯ ನಾಲ್ಕು ಇನಿಂಗ್ಸ್‌ಗಳಲ್ಲಿ 38 ರನ್‌ಗನ್ನಷ್ಟೇ ಗಳಿಸಿದ್ದರು.

ಆಸ್ಟ್ರೇಲಿಯಾದ ಸ್ಟೀವ್‌ ಸ್ಮಿತ್‌, ಕೊಹ್ಲಿ ಅವರಿಗಿಂತ 25 ಪಾಯಿಂಟ್ಸ್‌ ಹೆಚ್ಚು ಹೊಂದಿದ್ದಾರೆ. ಮಾರ್ನಸ್‌ ಲಾಬುಶೇನ್‌ ಒಂದು ಸ್ಥಾನ ಬಡ್ತಿ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಭಾರತದ ಆಟಗಾರರ ಪೈಕಿ ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ ಮತ್ತು ಮಯಂಕ್‌ ಅಗರವಾಲ್‌ ಕ್ರಮವಾಗಿ 7,9 ಮತ್ತು 11ನೇ ಸ್ಥಾನದಲ್ಲಿದ್ದಾರೆ.

ಭಾರತ ವಿರುದ್ಧ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ವೇಗದ ಬೌಲರ್ ಟಿಮ್‌ ಸೌಥಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಹಿಂದಿನ ಪಟ್ಟಿಯಲ್ಲಿ ಅವರು ಆರನೇ ಸ್ಥಾನದಲ್ಲಿದ್ದರು. ಜಸ್‌ಪ್ರೀತ್‌ ಬೂಮ್ರಾ ಮತ್ತು ಟ್ರೆಂಟ್‌ ಬೌಲ್ಟ್‌ ಕ್ರಮವಾಗಿ ಏಳು ಮತ್ತು ಒಂಬತ್ತನೇ
ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು