ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಸ್ಟ್‌ ರ‍್ಯಾಂಕಿಂಗ್‌: 60ನೇ ಸ್ಥಾನಕ್ಕೇರಿದ ಪೃಥ್ವಿ, ಅಗ್ರಸ್ಥಾನದಲ್ಲಿ ಕೊಹ್ಲಿ

ಐಸಿಸಿ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌: ಅಗ್ರಸ್ಥಾನದಲ್ಲಿ ಕೊಹ್ಲಿ
Last Updated 15 ಅಕ್ಟೋಬರ್ 2018, 10:54 IST
ಅಕ್ಷರ ಗಾತ್ರ

ದುಬೈ: ಭಾರತ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ‍ಪೃಥ್ವಿ ಶಾ ಮತ್ತು ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಅವರು ಸೋಮವಾರ ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಕ್ರಮವಾಗಿ 60 ಮತ್ತು 62ನೇ ಸ್ಥಾನಗಳಿಗೆ ಏರಿಕೆ ಕಂಡಿದ್ದಾರೆ.

ರಾಜ್‌ಕೋಟ್‌ನಲ್ಲಿ ನಡೆದಿದ್ದ ವೆಸ್ಟ್‌ ಇಂಡೀಸ್‌ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಶತಕ ಸಿಡಿಸಿದ್ದ ಪೃಥ್ವಿ 73ನೇ ಸ್ಥಾನ ಗಳಿಸಿದ್ದರು. ಹೈದರಾಬಾದ್‌ನಲ್ಲಿ ಜರುಗಿದ್ದ ಎರಡನೇ ಟೆಸ್ಟ್‌ನಲ್ಲಿ ಅವರು ಎರಡು ಇನಿಂಗ್ಸ್‌ಗಳಿಂದ 103ರನ್‌ ದಾಖಲಿಸಿದ್ದರು. ಈ ಮೂಲಕ 13 ಸ್ಥಾನಗಳಲ್ಲಿ ಪ್ರಗತಿ ಕಂಡಿದ್ದಾರೆ.

ರಿಷಭ್‌, ಎರಡೂ ಟೆಸ್ಟ್‌ಗಳಲ್ಲಿ 92ರನ್‌ ಗಳಿಸಿ ಔಟಾಗಿದ್ದರು. ಅವರು 23 ಸ್ಥಾನ ಮೇಲೇರಿದ್ದಾರೆ.

ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ. ಅಜಿಂಕ್ಯ ರಹಾನೆ 18ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ಉಮೇಶ್‌ ಯಾದವ್‌ 25ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ಅವರು ನಾಲ್ಕು ಸ್ಥಾನ ಪ್ರಗತಿ ಕಂಡಿದ್ದಾರೆ. ಎರಡನೇ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಿಂದ ಅವರು 10 ವಿಕೆಟ್‌ ಉರುಳಿಸಿದ್ದರು.

ವೆಸ್ಟ್‌ ಇಂಡೀಸ್‌ ತಂಡದ ನಾಯಕ ಜೇಸನ್‌ ಹೋಲ್ಡರ್‌ ಒಂಬತ್ತನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದು ಅವರ ವೃತ್ತಿಬದುಕಿನ ಶ್ರೇಷ್ಠ ಸಾಧನೆಯಾಗಿದೆ. ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಹೋಲ್ಡರ್‌ 53ನೇ ಸ್ಥಾನದಲ್ಲಿದ್ದಾರೆ.

ರೋಸ್ಟನ್‌ ಚೇಸ್‌ ಮತ್ತು ಶಾಯ್‌ ಹೋಪ್‌ ಅವರು ಕ್ರಮವಾಗಿ 31 ಮತ್ತು 35ನೇ ಸ್ಥಾನಗಳಲ್ಲಿದ್ದಾರೆ.

ತಂಡಗಳ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನವನ್ನು ಇನ್ನಷ್ಟು ಭದ್ರಪಡಿಸಿಕೊಂಡಿದೆ. ವಿಂಡೀಸ್‌ ವಿರುದ್ಧ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಿದ್ದರಿಂದ ತಂಡದ ಖಾತೆಗೆ ಒಂದು ಪಾಯಿಂಟ್‌ ಸೇರ್ಪಡೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT