ದುಬೈ: ಭಾರತದ ಸ್ಪಿನ್ನರ್ ಕುಲದೀಪ್ ಯಾದವ್, ಸೋಮವಾರ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬಿಡುಗಡೆ ಮಾಡಿರುವ ಟ್ವೆಂಟಿ–20 ಬೌಲರ್ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದು ಕುಲದೀಪ್ ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ.

ಚೈನಾಮನ್ ಶೈಲಿಯ ಬೌಲರ್ ಕುಲದೀಪ್, ಭಾನುವಾರ ನಡೆದಿದ್ದ ನ್ಯೂಜಿಲೆಂಡ್ ಎದುರಿನ ಮೂರನೇ ಟ್ವೆಂಟಿ–20 ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ನಾಲ್ಕು ಓವರ್ ಬೌಲರ್ ಮಾಡಿದ್ದ ಅವರು 26ರನ್ ನೀಡಿ ಎರಡು ವಿಕೆಟ್ ಉರುಳಿಸಿದ್ದರು.ಈ ಮೂಲಕ 24 ವರ್ಷದ ಆಟಗಾರ, ಒಟ್ಟು ಪಾಯಿಂಟ್ಸ್ ಅನ್ನು 728ಕ್ಕೆ ಹೆಚ್ಚಿಸಿಕೊಂಡಿದ್ದಾರೆ.

ಉಳಿದಂತೆ ಭಾರತದ ಯಾವ ಬೌಲರ್ ಕೂಡಾ ಅಗ್ರ ಹತ್ತರೊಳಗೆ ಸ್ಥಾನ ಗಳಿಸಿಲ್ಲ. ಸ್ಪಿನ್ನರ್ ಯಜುವೇಂದ್ರ ಚಾಹಲ್ 17ನೇ ಸ್ಥಾನಕ್ಕೆ ಕುಸಿದಿದ್ದರು. ಅವರು ಆರು ಸ್ಥಾನ ಕಳೆದುಕೊಂಡಿದ್ದಾರೆ. ಚಾಹಲ್ ಖಾತೆಯಲ್ಲಿ 609 ಪಾಯಿಂಟ್ಸ್ ಇವೆ. ಭುವನೇಶ್ವರ್ ಕುಮಾರ್ 18ನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಎಡಗೈ ಸ್ಪಿನ್ನರ್ ಕೃಣಾಲ್ ಪಾಂಡ್ಯ 58ನೇ ಸ್ಥಾನಕ್ಕೆ ಪ್ರಗತಿ ಕಂಡಿದ್ದಾರೆ. ಇದು ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ. ಕೃಣಾಲ್ 39 ಸ್ಥಾನ ಬಡ್ತಿ ಹೊಂದಿದ್ದಾರೆ.

ಅಫ್ಗಾನಿಸ್ತಾನದ ಲೆಗ್ ಸ್ಪಿನ್ನರ್ ರಶೀದ್ ಖಾನ್ (793 ಪಾಯಿಂಟ್ಸ್) ಈ ಪಟ್ಟಿಯಲ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

ಮೂರು ಸ್ಥಾನ ಏರಿದ ರೋಹಿತ್: ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಭಾರತದ ಉಪ ನಾಯಕ ರೋಹಿತ್ ಶರ್ಮಾ, ಏಳನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ಅವರು ಮೂರು ಸ್ಥಾನ ಪ್ರಗತಿ ಕಂಡಿದ್ದಾರೆ.

ನ್ಯೂಜಿಲೆಂಡ್ ಎದುರಿನ ಎರಡನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ಬಲಗೈ ಬ್ಯಾಟ್ಸ್ಮನ್ ರೋಹಿತ್, ಟ್ವೆಂಟಿ–20 ಮಾದರಿಯಲ್ಲಿ ಅತಿ ಹೆಚ್ಚು ರನ್ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಅವರು ಒಟ್ಟು 698 ಪಾಯಿಂಟ್ಸ್ ಹೊಂದಿದ್ದಾರೆ. ನ್ಯೂಜಿಲೆಂಡ್ ಎದುರಿನ ಸರಣಿಗೆ ತಂಡದಿಂದ ಸ್ಥಾನ ಕಳೆದುಕೊಂಡಿದ್ದ ಕರ್ನಾಟಕದ ಕೆ.ಎಲ್.ರಾಹುಲ್ ಹತ್ತನೇ ಸ್ಥಾನಕ್ಕೆ ಇಳಿದಿದ್ದಾರೆ. ಶಿಖರ್ ಧವನ್ 11ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಾಲ್ಕು ಸ್ಥಾನ ಕಳೆದುಕೊಂಡಿದ್ದಾರೆ. ಅವರು ಜಿಂಬಾಬ್ವೆಯ ಹ್ಯಾಮಿಲ್ಟನ್ ಮಸಕಜ ಜೊತೆ ಜಂಟಿ 19ನೇ ಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಮತ್ತು ರಾಸ್ ಟೇಲರ್ ಅವರು ಕ್ರಮವಾಗಿ 12 ಮತ್ತು 51ನೇ ಸ್ಥಾನಗಳಿಗೆ ಏರಿಕೆ ಕಂಡಿದ್ದಾರೆ.

ತಂಡಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿ ಮುಂದುವರಿದಿದೆ. ನ್ಯೂಜಿಲೆಂಡ್ ಎದುರು ಸರಣಿ ಸೋತಿದ್ದ ತಂಡ ಎರಡು ರ್ಯಾಂಕಿಂಗ್ ಪಾಯಿಂಟ್ಸ್ ಕಳೆದುಕೊಂಡಿದೆ. ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.