ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ರ‍್ಯಾಂಕಿಂಗ್: ಹತ್ತನೇ ಸ್ಥಾನಕ್ಕೆ ಮಯಂಕ್

Last Updated 26 ನವೆಂಬರ್ 2019, 19:45 IST
ಅಕ್ಷರ ಗಾತ್ರ

ದುಬೈ : ಭಾರತ ತಂಡದ ಆಟಗಾರ, ಬೆಂಗಳೂರಿನ ಮಯಂಕ್‌ ಅಗರವಾಲ್‌ ಮಂಗಳವಾರ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕಪಟ್ಟಿಯಲ್ಲಿ ಹತ್ತನೇ ಸ್ಥಾನಕ್ಕೇರಿದ್ದಾರೆ.

ಇಂದೋರ್‌ನಲ್ಲಿ ನಡೆದಿದ್ದ ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಮಯಂಕ್‌ ದ್ವಿಶತಕ ಸಿಡಿಸಿದ್ದರು. ಇದರೊಂದಿಗೆ ತಮ್ಮ ಅಂಕಗಳನ್ನು 700ಕ್ಕೆ ಹೆಚ್ಚಿಸಿಕೊಂಡಿದ್ದಾರೆ. ಅವರು 11ರಿಂದ 10ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT