ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ICC Ranking | ಎರಡನೇ ಸ್ಥಾನಕ್ಕೆ ಗಿಲ್; ಅಗ್ರ ಹತ್ತರಲ್ಲಿ ಕೊಹ್ಲಿ, ರೋಹಿತ್

Published 13 ಸೆಪ್ಟೆಂಬರ್ 2023, 13:56 IST
Last Updated 13 ಸೆಪ್ಟೆಂಬರ್ 2023, 13:56 IST
ಅಕ್ಷರ ಗಾತ್ರ

ದುಬೈ: ಭಾರತ ತಂಡದ ಯುವ ಬ್ಯಾಟರ್ ಶುಭಮನ್ ಗಿಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ರ‍್ಯಾಂಕಿಂಗ್‌ನಲ್ಲಿ ಏಕದಿನ ಕ್ರಿಕೆಟ್ ವಿಭಾಗದಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದು ಅವರು ತಮ್ಮ ವೃತ್ತಿಜೀವನದಲ್ಲಿ ಗಳಿಸಿದ ಅತ್ಯುನ್ನತ ರ‍್ಯಾಂಕಿಂಗ್ ಆಗಿದೆ.

ಮಂಗಳವಾರ ಬಿಡುಗಡೆಯಾದ ಪಟ್ಟಿಯಲ್ಲಿ 759 ಅಂಕಗಳನ್ನು ಹೊಂದಿರುವ ಗಿಲ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಹೋದ ವಾರವಷ್ಟೇ ಅವರು ಮೂರನೇ ಸ್ಥಾನದಲ್ಲಿದ್ದರು. ಏಷ್ಯಾಕ ಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ ವಿರಾಟ್ ಕೊಹ್ಲಿ ಎಂಟು ಹಾಗೂ ರೋಹಿತ್ ಶರ್ಮಾ 9ನೇ ಸ್ಥಾನದಲ್ಲಿದ್ದಾರೆ. ನಾಲ್ಕು ವರ್ಷಗಳ ನಂತರ ಅಗ್ರ ಹತ್ತರಲ್ಲಿ ಭಾರತದ ಮೂವರು ಬ್ಯಾಟರ್‌ಗಳು ಸ್ಥಾನ ಪಡೆದಿದ್ದಾರೆ. 2019ರಲ್ಲಿ ರೋಹಿತ್, ವಿರಾಟ್ ಹಾಗೂ ಶಿಖರ್ ಧವನ್ ಇದ್ದರು.

ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ಈ ವಿಭಾಗದಲ್ಲಿ ತಮ್ಮ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ರಸಿ ವ್ಯಾನ್ ಡರ್ ಡಸೆ ಹಾಗೂ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರು ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಗಳಲ್ಲಿದ್ದಾರೆ.

ಬೌಲರ್‌ ವಿಭಾಗದಲ್ಲಿ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಐದು ಸ್ಥಾನಗಳ ಬಡ್ತಿ ಪಡೆದಿದ್ದಾರೆ. 656 ಅಂಕಗಳೊಂದಿಗೆ ಏಳನೇ ಸ್ಥಾನಕ್ಕೇರಿದ್ದಾರೆ. ಮೊಹಮ್ಮದ್ ಸಿರಾಜ್ ಒಂಬತ್ತನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಆಲ್‌ರೌಂಡರ್‌ಗಳ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ 237 ಅಂಕಗಳೊಂದಿಗೆ ಆರನೇ ಸ್ಥಾನಕ್ಕೇರಿದ್ದಾರೆ. ಬಾಂಗ್ಲಾದ ಶಕೀಬ್ ಅಲ್ ಹಸನ್ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT