ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ20 ಕ್ರಿಕೆಟ್: ಆರಕ್ಕೇರಿದ ಇಶಾನ್‌, ಭಾರಿ ಬಡ್ತಿ ಗಿಟ್ಟಿಸಿದ ದಿನೇಶ್

ಐಸಿಸಿ ರ‍್ಯಾಂಕಿಂಗ್: ಟೆಸ್ಟ್ ಆಲ್‌ರೌಂಡರ್‌ ವಿಭಾಗದಲ್ಲಿ ಜಡೇಜ ಪಾರಮ್ಯ
Last Updated 22 ಜೂನ್ 2022, 12:06 IST
ಅಕ್ಷರ ಗಾತ್ರ

ದುಬೈ:ಅನುಭವಿ ವಿಕೆಟ್‌ ಕೀಪರ್ –ಬ್ಯಾಟರ್ ದಿನೇಶ್ ಕಾರ್ತಿಕ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟಿ20 ರ‍್ಯಾಂಕಿಂಗ್‌ನಲ್ಲಿ 108 ಸ್ಥಾನಗಳ ಬಡ್ತಿ ಪಡೆದಿದ್ದಾರೆ. ಯುವ ಆಟಗಾರ ಇಶಾನ್ ಕಿಶನ್ ಆರನೇ ಸ್ಥಾನಕ್ಕೇರಿದ್ದಾರೆ.

ಈಚೆಗೆ ಮುಕ್ತಾಯವಾದ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯಲ್ಲಿ ದಿನೇಶ್ ಉತ್ತಮವಾಗಿ ಆಡಿದ್ದರು. ಅವರು ಈಗ 87ನೇ ಸ್ಥಾನಕ್ಕೇರಿದ್ದಾರೆ.

ಇದೇ ಸರಣಿಯಲ್ಲಿ ಯುವ ವಿಕೆಟ್‌ಕೀಪರ್ ಬ್ಯಾಟರ್ ಇಶಾನ್ ಒಟ್ಟು 206 ರನ್‌ ಗಳಿಸಿದ್ದರು. ಇದರಿಂದಾಗಿ ಅವರು ಏಳರಿಂದ ಆರನೇ ಸ್ಥಾನಕ್ಕೇರಿದ್ದಾರೆ. ಸರಣಿಯಕೊನೆಯ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. 2–2ರಿಂದ ಸಮವಾಗಿತ್ತು.

‍ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಸ್ಪಿನ್ನರ್ ಯಜುವೇಂದ್ರ ಚಾಹಲ್ 23ನೇ ಸ್ಥಾನಕ್ಕೇರಿದ್ಧಾರೆ. ಮೂರು ಸ್ಥಾನಗಳ ಬಡ್ತಿ ಹೊಂದಿದ್ದಾರೆ. ಅವರು ದಕ್ಷಿಣ ಆಫ್ರಿಕಾ ಎದುರು ಆರು ವಿಕೆಟ್ ಗಳಿಸಿದ್ದರು. ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

ಟೆಸ್ಟ್ ರ‍್ಯಾಂಕಿಂಗ್‌ನ ಆಲ್‌ರೌಂಡರ್ ವಿಭಾಗದಲ್ಲಿ ಭಾರತದ ರವೀಂದ್ರ ಜಡೇಜ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಅವರ ಖಾತೆಯಲ್ಲಿ 385 ಅಂಕಗಳು ಇವೆ. ಸದ್ಯ ಕ್ರಿಕೆಟ್ ಸರಣಿ ಆಡಲು ಇಂಗ್ಲೆಂಡ್‌ನಲ್ಲಿರುವ ಭಾರತ ತಂಡದಲ್ಲಿ ಅವರಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿದ್ದಾರೆ. ಅವರ ಖಾತೆಯಲ್ಲಿ 901 ಅಂಕಗಳು ಇವೆ.ಆರ್. ಅಶ್ವಿನ್ (850) ಮತ್ತು ಜಸ್‌ಪ್ರೀತ್ ಬೂಮ್ರಾ (830) ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ.

ಬ್ಯಾಟಿಂಗ್‌ನಲ್ಲಿ ಭಾರತದ ವಿರಾಟ್ ಕೊಹ್ಲಿ 10ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT