ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್ | ಅಗ್ರಸ್ಥಾನ ಉಳಿಸಿಕೊಂಡ ವಿರಾಟ್‌ ಕೊಹ್ಲಿ

Last Updated 25 ಜನವರಿ 2020, 19:30 IST
ಅಕ್ಷರ ಗಾತ್ರ

ದುಬೈ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ಶುಕ್ರವಾರ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಅಜಿಂಕ್ಯ ರಹಾನೆ ಅವರು ಒಂಬತ್ತರಿಂದ ಎಂಟನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ವಿರಾಟ್‌ ಅವರ ಖಾತೆಯಲ್ಲಿ ಒಟ್ಟು 928 ಪಾಯಿಂಟ್ಸ್ ಇವೆ. ಅವರು, ಎರಡನೇ ಸ್ಥಾನದಲ್ಲಿರುವ ಸ್ಟೀವ್‌ ಸ್ಮಿತ್‌ಗಿಂತ 17 ಪಾಯಿಂಟ್ಸ್‌ ಹೆಚ್ಚು ಹೊಂದಿದ್ದಾರೆ.

ಚೇತೇಶ್ವರ ಪೂಜಾರ ಕೂಡ ಅಗ್ರ ಹತ್ತರೊಳಗೆ ಸ್ಥಾನ ಗಳಿಸಿದ್ದಾರೆ. ಒಟ್ಟು 794 ಪಾಯಿಂಟ್ಸ್‌ ಕಲೆಹಾಕಿರುವ ಅವರು ಆರನೇ ಸ್ಥಾನ ಕಾಪಾಡಿಕೊಂಡಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ಜಸ್‌ಪ್ರೀತ್‌ ಬೂಮ್ರಾ ಆರನೇ ಸ್ಥಾನದಲ್ಲಿದ್ದಾರೆ. ಅವರು 794 ಪಾಯಿಂಟ್ಸ್‌ ಸಂಗ್ರಹಿಸಿದ್ದಾರೆ. ರವಿಚಂದ್ರನ್‌ ಅಶ್ವಿನ್‌ ಮತ್ತು ಮೊಹಮ್ಮದ್‌ ಶಮಿ ಅವರೂ ಅಗ್ರ ಹತ್ತರೊಳಗೆ ಇದ್ದಾರೆ. ಅಶ್ವಿನ್‌ ಮತ್ತು ಶಮಿ ಕ್ರಮವಾಗಿ ಎಂಟು ಮತ್ತು ಹತ್ತನೇ ಸ್ಥಾನಗಳಲ್ಲಿ ಮುಂದುವರಿದಿದ್ದಾರೆ.

438 ಪಾಯಿಂಟ್ಸ್‌ ಗಳಿಸಿರುವ ರವೀಂದ್ರ ಜಡೇಜ, ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಹರಾರೆಯಲ್ಲಿ ನಡೆದಿದ್ದ ಜಿಂಬಾಬ್ವೆ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಅಜೇಯ ದ್ವಿಶತಕ ಸಿಡಿಸಿದ್ದ ಶ್ರೀಲಂಕಾದ ಏಂಜೆಲೊ ಮ್ಯಾಥ್ಯೂಸ್‌ ಅವರು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 16ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ.

ಶ್ರೀಲಂಕಾದ ಬ್ಯಾಟ್ಸ್‌ಮನ್‌ಗಳಾದ ಕುಶಾಲ್‌ ಮೆಂಡಿಸ್‌ ಮತ್ತು ಧನಂಜಯ ಡಿಸಿಲ್ವಾ, ಬೌಲರ್‌ಗಳಾದ ಸುರಂಗ ಲಕ್ಮಲ್‌ ಮತ್ತು ಲಾಹಿರು ಕುಮಾರ ಅವರೂ ರ‍್ಯಾಂಕಿಂಗ್‌ನಲ್ಲಿ ಪ್ರಗತಿ ಕಂಡಿದ್ದಾರೆ. ಜಿಂಬಾಬ್ವೆಯ ಬೌಲರ್‌ ಸಿಕಂದರ ರಾಜಾ 79ರಿಂದ 72ನೇ ಸ್ಥಾನಕ್ಕೆ ಏರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT