ಬುಧವಾರ, ಸೆಪ್ಟೆಂಬರ್ 29, 2021
19 °C

ಐಸಿಸಿ ಮಹಿಳಾ ಏಕದಿನ ರ್‍ಯಾಂಕಿಂಗ್: ಮತ್ತೆ ಅಗ್ರಸ್ಥಾನಕ್ಕೇರಿದ ಮಿಥಾಲಿ

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್‌ ಐಸಿಸಿ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ 762 ಅಂಕಗಳೊಂದಿಗೆ ಮತ್ತೆ ಅಗ್ರಸ್ಥಾನಕ್ಕೆ ಮರಳಿದ್ದಾರೆ. ಎಡಗೈ ಬ್ಯಾಟರ್ ಸ್ಮೃತಿ ಮಂದಾನ ಒಂಬತ್ತನೇ ಸ್ಥಾನದಲ್ಲಿದ್ದಾರೆ.

16 ವರ್ಷಗಳ ಹಿಂದೆ ಮೊದಲ ಬಾರಿಗೆ ಅಗ್ರ ಸ್ಥಾನ ಅಲಂಕರಿಸಿದ್ದ ಮಿಥಾಲಿ, ಒಂಬತ್ತನೇ ಬಾರಿಗೆ ಬ್ಯಾಟುಗಾರ್ತಿಯರ ರ್‍ಯಾಂಕಿಂಗ್ ಪಟ್ಟಿಯಲ್ಲಿ ಪ್ರಥಮ ಸ್ಥಾನಕ್ಕೆ ಏರಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ, ಐದನೇ ಸ್ಥಾನದಲ್ಲಿರುವ ಝುಲನ್ ಗೋಸ್ವಾಮಿ ಟಾಪ್ 10 ರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ. ಆಲ್ ರೌಂಡರ್ ವಿಭಾಗದಲ್ಲಿ ದೀಪ್ತಿ ಶರ್ಮಾ 5ನೇ ಸ್ಥಾನ ಪಡೆದಿದ್ದಾರೆ.

ಮಹಿಳಾ ಟಿ 20 ಆಟಗಾರ್ತಿಯರ ರ್‍ಯಾಂಕಿಂಗ್‌ನಲ್ಲಿ ಭಾರತದ ಎಡಗೈ ಓಪನರ್ ಸ್ಮೃತಿ ಮಂದಾನ ವೃತ್ತಿಜೀವನದ ಅತ್ಯುತ್ತಮ ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯ ಅಂತಿಮ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನದ ಮೂಲಕ 70 ರನ್ ಗಳಿಸಿದ ನಂತರ ಸ್ಮೃತಿಯವರ ರ್‍ಯಾಂಕಿಂಗ್ ಉತ್ತಮಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು