ಭಾನುವಾರ, ಏಪ್ರಿಲ್ 11, 2021
28 °C
ಸ್ಪಿನ್ ಜೋಡಿ ಅಶ್ವಿನ್, ಅಕ್ಷರ್ ಪಟೇಲ್‌ ಬಡ್ತಿ

ಐಸಿಸಿ ರ‍್ಯಾಂಕಿಂಗ್: ಎಂಟನೇ ಸ್ಥಾನಕ್ಕೆ ರೋಹಿತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದುಬೈ (ಪಿಟಿಐ): ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಬ್ಯಾಟ್ಸ್‌ಮನ್ ರ‍್ಯಾಂಕಿಂಗ್‌ನಲ್ಲಿ ಎಂಟನೇ ಸ್ಥಾನಕ್ಕೇರಿದ್ದಾರೆ.

ತಮ್ಮ ವೃತ್ತಿಜೀವನದಲ್ಲಿಯೇ ರೋಹಿತ್ ಗಳಿಸಿರುವ ಶ್ರೇಷ್ಠ ರ‍್ಯಾಂಕಿಂಗ್ ಇದಾಗಿದೆ. ಮೊಟೇರಾ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಎದುರು ರೋಹಿತ್ ಮೊದಲ ಇನಿಂಗ್ಸ್‌ನಲ್ಲಿ 66 ಮತ್ತು ಎರಡನೇ ಇನಿಂಗ್ಸ್‌ನಲ್ಲಿ ಅಜೇಯ 25 ರನ್ ಗಳಿಸಿದ್ದರು.  2019ರ ಅಕ್ಟೋಬರ್‌ನಲ್ಲಿ ಅವರು 10ನೇ ಸ್ಥಾನ ಪಡೆದಿದ್ದರು.

ಕಳೆದ ಪಂದ್ಯದ ಶ್ರೇಷ್ಟ ಆಟಗಾರ ಗೌರವ ಗಳಿಸಿದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಬೌಲಿಂಗ್ ವಿಭಾಗದಲ್ಲಿ 38ನೇ ಸ್ಥಾನಕ್ಕೇರಿದ್ದಾರೆ. ಆಫ್‌ಸ್ಪಿನ್ನರ್ ಆರ್. ಅಶ್ವಿನ್ ನಾಲ್ಕು ಸ್ಥಾನಗಳ ಬಡ್ತಿ ಪಡೆದು ಮೂರನೇ ಸ್ಥಾನಕ್ಕೇರಿದ್ದಾರೆ.

ಇಂಗ್ಲೆಂಡ್ ಸ್ಪಿನ್ನರ್ ಜ್ಯಾಕ್ ಲೀಚ್ ಇದೇ ಮೊದಲ ಬಾರಿಗೆ ಮೂವತ್ತನೇ ಸ್ಥಾನ ಗಳಿಸಿದ್ದಾರೆ. ಜೋ ರೂಟ್ ಅವರು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ  16 ಸ್ಥಾನಗಳ ಏರಿಕೆ ಕಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು