ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಕೊಹ್ಲಿಯೇ ‘ಕಿಂಗ್‌’

ಕೇನ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ ಸ್ಮಿತ್
Last Updated 20 ಆಗಸ್ಟ್ 2019, 5:07 IST
ಅಕ್ಷರ ಗಾತ್ರ

ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದಿದ್ದಾರೆ.

ಪರಿಷ್ಕೃತ ಪಟ್ಟಿಯನ್ನು ಐಸಿಸಿ ಸೋಮವಾರ ಬಿಡುಗಡೆ ಮಾಡಿದ್ದು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.

ವಿರಾಟ್ ಕೊಹ್ಲಿ ಅವರ ಖಾತೆಯಲ್ಲಿ ಈಗ 922 ಪಾಯಿಂಟ್‌ಗಳಿವೆ. ಸ್ಮಿತ್‌ ಬಗಲಲ್ಲಿ 913 ಪಾಯಿಂಟ್‌ ಗಳಿವೆ. ಅವರು ಆ್ಯಷಸ್ ಸರಣಿಯ ಮೊದಲ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ್ದರು. ಎರಡನೇ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 92 ರನ್ ಕಲೆ ಹಾಕಿದ್ದರು.

ಅಗ್ರ 10 ಮಂದಿಯ ಪಟ್ಟಿಯಲ್ಲಿ ಭಾರತದ ಚೇತೇಶ್ವರ ಪೂಜಾರ ಸ್ಥಾನ ಗಳಿಸಿದ್ದಾರೆ. ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ಎದುರಿನ ಟೆಸ್ಟ್‌ನಲ್ಲಿ ತಂಡಕ್ಕೆ ಅಮೋಘ ಜಯ ಗಳಿಸಿಕೊಟ್ಟ ಶ್ರೀಲಂಕಾದ ದಿಮುತ್ ಕರುಣಾರತ್ನೆ ಏಕಾಏಕಿ ನಾಲ್ಕು ಸ್ಥಾನಗಳ ಏರಿಕೆ ಕಂಡಿದ್ದು ಎಂಟನೇ ಸ್ಥಾನದಲ್ಲಿದ್ದಾರೆ.

ದಕ್ಷಿಣ ಆಫ್ರಿಕಾದ ಏಡನ್‌ ಮರ್ಕರಮ್ ಆರನೇ ಸ್ಥಾನಕ್ಕೆ ಏರಿದ್ದರೆ, ಇಂಗ್ಲೆಂಡ್ ನಾಯಕ ಜೋ ರೂಟ್ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅಗ್ರ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರನೇ ಸ್ಥಾನದಲ್ಲಿದ್ದ ಭಾರತದ ರವೀಂದ್ರ ಜಡೇಜ ಒಂದು ಸ್ಥಾನದ ಏರಿಕೆ ಕಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT