ಶನಿವಾರ, ಡಿಸೆಂಬರ್ 4, 2021
24 °C

ಈ ವರೆಗಿನ ಟಿ20 ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧದ ಗೆಲುವಿನ ರೋಚಕ ಕ್ಷಣ ಸವಿಯಿರಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಎಂದಿಗೂ ಸೋತಿಲ್ಲ. ಏಕದಿನ ಹಾಗೂ ಟ್ವೆಂಟಿ-20 ವಿಶ್ವಕಪ್ ಸೇರಿದಂತೆ ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ ಗೆಲುವಿನ ದಾಖಲೆ ಹೊಂದಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ರೋಚಕ ಪಂದ್ಯಕ್ಕೆ ಕೆಲವೇ ತಾಸಿಗೂ ಮೊದಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಈ ಸಂಬಂಧ ವಿಡಿಯೊವನ್ನು ಬಿಡುಗಡೆಗೊಳಿಸಿದೆ.

ಇದನ್ನೂ ಓದಿ: 

ಟ್ವೆಂಟಿ-20 ವಿಶ್ವಕಪ್‌ನಲ್ಲಿ ಇದುವರೆಗೆ ಪಾಕಿಸ್ತಾನ ವಿರುದ್ಧ ಆಡಿರುವ ಎಲ್ಲ ಐದು ಪಂದ್ಯಗಳಲ್ಲಿ ಭಾರತ ಗೆಲುವನ್ನು ದಾಖಲಿಸಿದೆ. ಟೀಮ್ ಇಂಡಿಯಾದ ಗೆಲುವಿನ ರೋಚಕ ಕ್ಷಣಗಳನ್ನು ಐಸಿಸಿ ಹಂಚಿಕೊಂಡಿದೆ. ಇದರಲ್ಲಿ 2007ರ ಚೊಚ್ಚಲ ಟಿ20 ವಿಶ್ವಕಪ್ ಗೆಲುವು ಸೇರಿಕೊಂಡಿದೆ.

 

 

 

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಗೆಲುವಿನ ದಾಖಲೆ ಇಂತಿದೆ:
2007 (ಸೆ.14): 'ಟೈ' ಪಂದ್ಯದಲ್ಲಿ ಬಾಲ್ ಔಟ್‌ನಲ್ಲಿ ಭಾರತಕ್ಕೆ ಗೆಲುವು, ಡರ್ಬನ್
2007 (ಸೆ.24): ಭಾರತಕ್ಕೆ 5 ರನ್ ಗೆಲುವು, ಜೋಹಾನ್ಸ್‌ಬರ್ಗ್
2012 (ಸೆ.30): ಭಾರತಕ್ಕೆ 8 ವಿಕೆಟ್ ಗೆಲುವು, ಕೊಲಂಬೊ
2014 (ಮಾ.21): ಭಾರತಕ್ಕೆ 7 ವಿಕೆಟ್ ಗೆಲುವು, ಢಾಕಾ
2016 (ಮಾ.19): ಭಾರತಕ್ಕೆ 6 ವಿಕೆಟ್ ಗೆಲುವು, ಕೋಲ್ಕತ್ತ.

 

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಪ್ತಾನಗಿರಿಯಲ್ಲಿ ಈ ಎಲ್ಲ ಐದು ಗೆಲುವು ಒದಗಿದೆ ಎಂಬುದು ಗಮನಾರ್ಹವೆನಿಸುತ್ತದೆ. ಈಗ ಗೆಲುವಿನ ದಾಖಲೆಯನ್ನು ಮುಂದುವರಿಸುವ ಜವಾಬ್ದಾರಿ ನಾಯಕ ವಿರಾಟ್ ಕೊಹ್ಲಿ ಹೆಗಲ ಮೇಲಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ರೋಚಕ ಹಣಾಹಣಿಯು ಭಾನುವಾರ ಸಂಜೆ 7.30ಕ್ಕೆ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು