ಸೋಮವಾರ, ಸೆಪ್ಟೆಂಬರ್ 27, 2021
23 °C

ಟಿ20 ರ‍್ಯಾಂಕಿಂಗ್‌: ಅಗ್ರಸ್ಥಾನ ಕಾಯ್ದುಕೊಂಡ ಶೆಫಾಲಿ

ಪಿಟಿಐ Updated:

ಅಕ್ಷರ ಗಾತ್ರ : | |

PTI

ದುಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಶೆಫಾಲಿ ವರ್ಮಾ ಅವರು ಐಸಿಸಿ ಟಿ20 ರ‍್ಯಾಂಕಿಂಗ್‌ನ ಬ್ಯಾಟರ್‌ಗಳ ವಿಭಾಗದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಮಂಗಳವಾರ ಪ್ರಕಟಗೊಂಡಿರುವ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಸೋಫಿ ಡಿವೈನ್‌ ಆಲ್‌ರೌಂಡರ್‌ಗಳ ವಿಭಾಗದಲ್ಲಿ ಜಂಟಿ ಅಗ್ರಸ್ಥಾನಕ್ಕೇರಿದ್ದಾರೆ.

ಶೆಫಾಲಿ ಅವರ ಬಳಿ ಸದ್ಯ 759 ರ‍್ಯಾಂಕಿಂಗ್ ಪಾಯಿಂಟ್‌ಗಳಿವೆ. ಆಸ್ಟ್ರೇಲಿಯಾದ ಬೆತ್ ಮೂನಿ (744) ಮತ್ತು ಭಾರತ ಟಿ20 ತಂಡದ ಉಪನಾಯಕಿ ಸ್ಮೃತಿ ಮಂದಾನ (716) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾದ ಇನ್ನೋರ್ವ ಆಟಗಾರ್ತಿ ಮೆಗ್ ಲ್ಯಾನಿಂಗ್‌ ನಾಲ್ಕನೇ ಸ್ಥಾನದಲ್ಲಿದ್ದು, ಡಿವೈನ್ ಐದನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್‌ ಎದುರಿನ ಮೂರನೇ ಟಿ20 ಪಂದ್ಯದಲ್ಲಿ ಮಿಂಚಿದ್ದ ಡಿವೈನ್‌, ಆ ದೇಶದ ನತಾಲಿ ಸೀವರ್ ಅವರೊಂದಿಗೆ ಅಲ್‌ರೌಂಡರ್‌ ವಿಭಾಗದ ಅಗ್ರಸ್ಥಾನ ಹಂಚಿಕೊಂಡಿದ್ದಾರೆ. ಈ ವಿಭಾಗದಲ್ಲಿ ಭಾರತದ ದೀಪ್ತಿ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದರೆ, ಬೌಲರ್‌ಗಳ ಪೈಕಿ ಆರನೇ ಸ್ಥಾನದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು