ಗುರುವಾರ , ಮಾರ್ಚ್ 30, 2023
23 °C

ಐಸಿಸಿ ಟ್ವೆಂಟಿ–20 ರ‍್ಯಾಂಕಿಂಗ್ಸ್: 5ನೇ ಸ್ಥಾನದಲ್ಲಿ ಕೊಹ್ಲಿ, 8ರಲ್ಲಿ ರಾಹುಲ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದುಬೈ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟಿ–20 ರ‍್ಯಾಂಕಿಂಗ್‌ನಲ್ಲಿ ಐದನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಇತ್ತ ವಿಕೆಟ್‌ ಕೀಪರ್‌, ಬ್ಯಾಟ್ಸ್‌ಮನ್‌ ಕೆ.ಎಲ್‌.ರಾಹುಲ್‌ 8ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಬುಧವಾರ ರ‍್ಯಾಂಕಿಂಗ್‌ಗಳನ್ನು ಪ್ರಕಟಿಸಲಾಗಿದೆ.

ಎಲ್ಲ ಮೂರೂ ವಿಭಾಗಗಳ (ಬ್ಯಾಟ್ಸ್‌ಮನ್‌, ಬೌಲರ್‌ ಹಾಗೂ ಆಲ್‌ರೌಂಡರ್‌) ರ‍್ಯಾಂಕಿಂಗ್‌ನ ಅಗ್ರ 10 ಮಂದಿಯ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾತ್ರ ಸ್ಥಾನ ಪಡೆದಿದ್ದಾರೆ.

ವಿಶೇಷವೆಂದರೆ ಈ ಬಾರಿ ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌​ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿ ಪಾಕಿಸ್ತಾನದ ನಾಯಕ ಬಾಬರ್ ಆಜಂ ಅಗ್ರಸ್ಥಾನಕ್ಕೇರಿದ್ದಾರೆ. ಪಾಕ್‌ನ ಮತ್ತೊಬ್ಬ ಆಟಗಾರ ಮೊಹಮ್ಮದ್ ರಿಜ್ವಾನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ 4ನೇ ಸ್ಥಾನ ಪಡೆದಿದ್ದಾರೆ.

ಶ್ರೀಲಂಕಾ ವಿರುದ್ದ ಶತಕ ಸಿಡಿಸಿದ್ದ ಇಂಗ್ಲೆಂಡ್ ಬ್ಯಾಟ್ಸ್​ಮನ್ ಜೋಸ್ ಬಟ್ಲರ್ ಅವರು ಆಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ.

ಬಾಬರ್ ಆಜಂ  834 ಪಾಯಿಂಟ್ಸ್‌ ಹೊಂದಿದ್ದಾರೆ. ಇಂಗ್ಲೆಂಡ್‌ನ ಡೇವಿಡ್ ಮಲಾನ್ 798 ಮತ್ತು ಆ್ಯರನ್ ಪಿಂಚ್ 733, ಮೊಹಮ್ಮದ್ ರಿಜ್ವಾನ್ 731, ವಿರಾಟ್ ಕೊಹ್ಲಿ 714, ಹಾಗೂ ಕೆ.ಎಲ್‌.ರಾಹುಲ್ 678 ಪಾಯಿಂಟ್ಸ್‌ಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ... T20 WC: ಅಫ್ಗನ್‌ ವಿರುದ್ಧದ ಪಂದ್ಯದಲ್ಲಿ ಚಾಹಲ್‌ ದಾಖಲೆ ಮುರಿಯುತ್ತಾರಾ ಬೂಮ್ರಾ?

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು