ಬುಧವಾರ, ಸೆಪ್ಟೆಂಬರ್ 22, 2021
28 °C

ಐಸಿಸಿ ಟ್ವೆಂಟಿ–20 ರ‍್ಯಾಂಕಿಂಗ್‌: ಐದನೇ ಸ್ಥಾನದಲ್ಲಿ ಕೊಹ್ಲಿ ಸ್ಥಿರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅನುಭವಿ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಅವರು ಐಸಿಸಿ ಟ್ವೆಂಟಿ–20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಅಗ್ರ 10ರೊಳಗಿನ ಸ್ಥಾನಗಳನ್ನು ಕಾಯ್ದುಕೊಂಡಿದ್ದಾರೆ.

ವಿರಾಟ್‌ ಸದ್ಯ ಐದನೇ ಸ್ಥಾನದಲ್ಲಿದ್ದರೆ, ರಾಹುಲ್‌ ಆರನೇ ಕ್ರಮಾಂಕದಲ್ಲಿ ಮುಂದುವರಿದಿದ್ದಾರೆ. ಶ್ರೀಲಂಕಾ ಎದುರಿನ ಸರಣಿಯ ಮೊದಲ ಪಂದ್ಯದಲ್ಲಿ 22 ರನ್‌ಗೆ ನಾಲ್ಕು ವಿಕೆಟ್ ಗಳಿಸಿದ್ದ ಭುವನೇಶ್ವರ್‌ ಕುಮಾರ್‌ ಅವರು ಬೌಲರ್‌ಗಳ ವಿಭಾಗದಲ್ಲಿ 16ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ ಅವರ ರ‍್ಯಾಂಕಿಂಗ್‌ನಲ್ಲೂ ಏರಿಕೆಯಾಗಿದೆ. 10 ಸ್ಥಾನಗಳ ಬಡ್ತಿ ಪಡೆದಿರುವ ಅವರು ಸದ್ಯ 21ನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ವನಿಂದು ಹಸರಂಗ ಜೀವನಶ್ರೇಷ್ಠ ಎರಡನೇ ಸ್ಥಾನಕ್ಕೇರಿದ್ದಾರೆ.

ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ರೋಹಿತ್ ಶರ್ಮಾ 14ನೇ ಸ್ಥಾನಕ್ಕೆ ಕುಸಿದಿದ್ದು, ಶಿಖರ್ ಧವನ್ 29ನೇ ಸ್ಥಾನದಲ್ಲಿದ್ದಾರೆ.

ಏಕದಿನ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನದ ಬಾಬರ್ ಆಜಂ ಅಗ್ರಸ್ಥಾನದಲ್ಲಿದ್ದು, ವಿರಾಟ್‌ ಹಾಗೂ ರೋಹಿತ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಬೌಲರ್‌ಗಳಲ್ಲಿ ಪಟ್ಟಿಯಲ್ಲಿ ಜಸ್‌ಪ್ರೀತ್ ಬೂಮ್ರಾ ಏಳನೇ ಸ್ಥಾನದಲ್ಲಿದ್ದಾರೆ. ಆಲ್‌ರೌಂಡರ್‌ಗಳ ವಿಭಾಗದಲ್ಲಿ ರವೀಂದ್ರ ಜಡೇಜ ಒಂಬತ್ತನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು