ಬುಧವಾರ, ಡಿಸೆಂಬರ್ 1, 2021
22 °C

16 ಕೋಟಿ ಜನರಿಂದ ಟಿ20 ವಿಶ್ವಕಪ್ ಟೂರ್ನಿ ವೀಕ್ಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಈಚೆಗೆ ನಡೆದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಗಳನ್ನು ಟಿವಿ ಮತ್ತು ಡಿಜಿಟಿಲ್ ವಾಹಿನಿಗಳಲ್ಲಿ 16.7 ಕೋಟಿ ಜನರು ವೀಕ್ಷಿಸಿದ್ದಾರೆ.

200 ದೇಶಗಳಲ್ಲಿ ಟೂರ್ನಿಯನ್ನು 10 ಸಾವಿರ ಗಂಟೆಗಳಷ್ಟು ಅವಧಿಯಲ್ಲಿ ವೀಕ್ಷಿಸಿದ್ದಾರೆ. ಐದು ವರ್ಷಗಳ ನಂತರ ನಡೆದ ಟಿ20 ವಿಶ್ವಕಪ್ ಇದಾಗಿತ್ತು. ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಐಸಿಸಿ ತಿಳಿಸಿದೆ.

ಭಾರತ, ಪಾಕಿಸ್ತಾನ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಜನರು ಪಂದ್ಯಗಳನ್ನು ವೀಕ್ಷಿಸಿದ್ದಾರೆ.

ಟೂರ್ನಿಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯವನ್ನು ಅತಿ ಹೆಚ್ಚು ಜನರು ನೋಡಿದ್ದಾರೆ. ಅಲ್ಲದೇ 15.9 ಬಿಲಿಯನ್ ನಿಮಿಷಗಳಷ್ಟು ಕಾಲ ವೀಕ್ಷಣೆಯಾಗಿದೆ ಎಂದು ಸ್ಟಾರ್ ಇಂಡಿಯಾ ನೆಟ್‌ವರ್ಕ್ ತಿಳಿಸಿದೆ.

2016ರ ವಿಶ್ವಕಪ್ ಟೂರ್ನಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಈ ಬಾರಿ ಜನರು ವೀಕ್ಷಿಸಿರುವುದು ದಾಖಲೆಯಾಗಿದೆ.

‘ವೀಕ್ಷಕರ ಸಂಖ್ಯೆ ಹೆಚ್ಚಳವಾಗುತ್ತಿರುವುದನ್ನು ನೋಡಿದರೆ ಟಿ20 ಕ್ರಿಕೆಟ್‌ನ ಶಕ್ತಿ ಮತ್ತು ಜನಪ್ರಿಯತೆಯು ಅರ್ಥವಾಗುತ್ತದೆ‘ ಎಂದು ಐಸಿಸಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆಫ್ ಅಲಾರ್ಡಿಸ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು