ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ICC T20I Cricketer Of The Year 2022: ಸೂರ್ಯಕುಮಾರ್ ಯಾದವ್ ನಾಮನಿರ್ದೇಶನ

Last Updated 29 ಡಿಸೆಂಬರ್ 2022, 12:42 IST
ಅಕ್ಷರ ಗಾತ್ರ

ದುಬೈ: ಭಾರತದ ಸೂರ್ಯಕುಮಾರ್ ಯಾದವ್ ಮತ್ತು ಸ್ಮೃತಿ ಮಂದಾನ ಅವರು ಐಸಿಸಿ ನೀಡುವ ಕ್ರಮವಾಗಿ ವರ್ಷದ ಟಿ20 ಪುರುಷ ಕ್ರಿಕೆಟಿಗ ಮತ್ತು ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಸೂರ್ಯ ಅವರೊಂದಿಗೆ, ಟಿ20 ವಿಶ್ವಕಪ್ ವಿಜೇತ ತಂಡ ಇಂಗ್ಲೆಂಡ್‌ನ ಆಲ್‌ರೌಂಡರ್ ಸ್ಯಾಮ್ ಕರನ್‌, ಪಾಕಿಸ್ತಾನದ ವಿಕೆಟ್‌ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್‌ ಮತ್ತು ಜಿಂಬಾಬ್ವೆಯ ಆಲ್‌ರೌಂಡರ್ ಸಿಕಂದರ್ ರಾಜಾ ಕೂಡ ಸ್ಪರ್ಧೆಯಲ್ಲಿದ್ದಾರೆ.

ಮಹಿಳೆಯರ ವಿಭಾಗದಲ್ಲಿ ಪಾಕಿಸ್ತಾನದ ಆಲ್‌ರೌಂಡರ್ ನಿದಾ ದರ್, ನ್ಯೂಜಿಲೆಂಡ್‌ನ ಸೋಫಿ ಡಿವೈನ್‌ ಮತ್ತು ಆಸ್ಟ್ರೇಲಿಯಾದ ತಹ್ಲಿಯಾ ಮೆಗ್ರಾ ಕೂಡ ಪಟ್ಟಿಯಲ್ಲಿದ್ದಾರೆ.

ಈ ವರ್ಷ ಅದ್ಭುತ ಫಾರ್ಮ್‌ನಲ್ಲಿರುವ ಸೂರ್ಯ, 2022ರಲ್ಲಿ ಟಿ20 ಮಾದರಿಯಲ್ಲಿ ಒಂದು ಸಾವಿರ ರನ್ ಪೂರ್ಣಗೊಳಿಸಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. 1164 ರನ್‌ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಶ್ರೇಯ ಪಡೆದಿದ್ದಾರೆ.

ಕಳೆದ ವರ್ಷ ಪ್ರಶಸ್ತಿಗೆ ಭಾಜನರಾಗಿದ್ದ ಮಂದಾನ, ಈ ವರ್ಷವೂ ಸ್ಥಿರ ಬ್ಯಾಟಿಂಗ್ ಮೂಲಕ ಗಮನಸೆಳೆದಿದ್ದಾರೆ. ಅತಿ ವೇಗದ ಅರ್ಧಶತಕ (23 ಎಸೆತ) ಗಳಿಸಿದ ಭಾರತದ ಬ್ಯಾಟರ್ ಎನಿಸಿಕೊಂಡಿರುವ ಅವರು ಟಿ20ಯಲ್ಲಿ 2500 ರನ್‌ಗಳ ಗಡಿ ದಾಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT