ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ ಸೋಮವಾರ ಬಿಡುಗಡೆ ಮಾಡಿರುವ ಟ್ವೆಂಟಿ–20 ರ‍್ಯಾಂಕಿಂಗ್‌ನಲ್ಲಿ ಕುಸಿತ ಕಂಡಿದ್ದಾರೆ. ಕೆ.ಎಲ್.ರಾಹುಲ್ ಮತ್ತು ರೋಹಿತ್ ಶರ್ಮಾ ಕ್ರಮವಾಗಿ ಎರಡನೇ ಮತ್ತು 11ನೇ ಸ್ಥಾನದಲ್ಲೇ ಉಳಿದಿದ್ದಾರೆ. ಪಾಕಿಸ್ತಾನದ ಬಾಬರ್ ಆಜಂ ಅಗ್ರ ಸ್ಥಾನ ಗಳಿಸಿದ್ದಾರೆ.

ಬ್ಯಾಟಿಂಗ್ ಮಾಂತ್ರಿಕ ಕೊಹ್ಲಿ 673 ಪಾಯಿಂಟ್‌ಗಳೊಂದಿಗೆ 10ನೇ ಸ್ಥಾನಕ್ಕೆ ಇಳಿದಿದ್ದು ಇಂಗ್ಲೆಂಡ್ ನಾಯಕ್ ಇಯಾನ್ ಮಾರ್ಗನ್ (687 ಪಾಯಿಂಟ್ಸ್) ಒಂಬತ್ತನೇ ಸ್ಥಾನಕ್ಕೆ ಏರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಅವರು ಎರಡು ಅರ್ಧಶತಕ ಸೇರಿದಂತೆ ಒಟ್ಟು 136 ರನ್ ಗಳಿಸಿದ್ದರು. ಸರಣಿಯಲ್ಲಿ ಇಂಗ್ಲೆಂಡ್ 2–1ರಲ್ಲಿ ಗೆಲುವು ಸಾಧಿಸಿತ್ತು.

ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ಮಧ್ಯಮ ವೇಗಿ ಜಸ್‌ಪ್ರೀತ್ ಬೂಮ್ರಾ 12ನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ. ವೆಸ್ಟ್ ಇಂಡೀಸ್‌ನ ಮಧ್ಯಮ ವೇಗಿ ಶೆಲ್ಡನ್ ಕಾಟ್ರೆಲ್ ಕೂಡ ಬೂಮ್ರಾ ಜೊತೆ ಸ್ಥಾನ ಹಂಚಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ಎಡಗೈ ಸ್ಪಿನ್ನರ್ ತಬ್ರೇಜ್ ಶಂಸಿ ಅಗ್ರ 10ರಲ್ಲಿ ಸ್ಥಾನ ಗಳಿಸಿದ್ದು ದಕ್ಷಿಣ ಆಫ್ರಿಕಾದ ಆ್ಯಂಡಿಲೆ ಪಿಶುವಾಯೊ ಅವರನ್ನು ಹಿಂದಿಕ್ಕಿ ಆದಿಲ್ ರಶೀದ್ ಆರನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬ್ಯಾಟ್ಸ್‌ಮನ್‌ಗಳ ಪೈಕಿ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ, ರಸಿ ವ್ಯಾನ್ ಡೆರ್ ಡುಸೆನ್ ಹಾಗೂ ಇಂಗ್ಲೆಂಡ್‌ನ ಜಾನಿ ಬೇಸ್ಟೊ ಏರಿಕೆ ಕಂಡಿದ್ದು ರಶೀದ್ ಖಾನ್ ಮತ್ತು ಮೊಹಮ್ಮದ್ ನಬಿ ಕ್ರಮವಾಗಿ ಬೌಲರ್ ಮತ್ತು ಆಲ್‌ರೌಂಡರ್‌ಗಳ ಪೈಕಿ ಅಗ್ರ ಸ್ಥಾನ ಗಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.