ಬುಧವಾರ, ನವೆಂಬರ್ 30, 2022
17 °C

ICC T20I Rankings: ಬಾಬರ್ ಹಿಂದಿಕ್ಕಿದ ಸೂರ್ಯಕುಮಾರ್‌ಗೆ 3ನೇ ಸ್ಥಾನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿದ ತಾಜಾ ಟ್ವೆಂಟಿ-20 ಬ್ಯಾಟಿಂಗ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಜಂ ಹಿಂದಿಕ್ಕಿರುವ ಭಾರತದ ಸೂರ್ಯಕುಮಾರ್ ಯಾದವ್ ಮೂರನೇ ಸ್ಥಾನ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಮೊಹಾಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವುದು ಸೂರ್ಯಕುಮಾರ್‌ಗೆ ಬಡ್ತಿ ಸಿಗಲು ನೆರವಾಗಿದೆ.

ಇದನ್ನೂ ಓದಿ: 

ಸೂರ್ಯಕುಮಾರ್ ಯಾದವ್ ಮೂರು (780 ರೇಟಿಂಗ್ ಪಾಯಿಂಟ್) ಹಾಗೂ ಬಾಬರ್ ಆಜಂ (771) ನಾಲ್ಕನೇ ಸ್ಥಾನದಲ್ಲಿದ್ದಾರೆ.

ಈ ವಿಭಾಗವನ್ನು ಪಾಕಿಸ್ತಾನದವರೇ ಆದ ಮೊಹಮ್ಮದ್ ರಿಜ್ವಾನ್ (825) ಮುನ್ನಡೆಸುತ್ತಿದ್ದು, ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕರಮ್ (792) ದ್ವಿತೀಯ ಸ್ಥಾನದಲ್ಲಿದ್ದಾರೆ.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 14 ಹಾಗೂ ವಿರಾಟ್ ಕೊಹ್ಲಿ 16ನೇ ಸ್ಥಾನದಲ್ಲಿದ್ದಾರೆ. ಈ ಪೈಕಿ ಕೊಹ್ಲಿ ಒಂದು ಸ್ಥಾನ ಕುಸಿತ ಕಂಡಿದ್ದಾರೆ.

ಆಸೀಸ್ ವಿರುದ್ಧ ಕೇವಲ 30 ಎಸೆತಗಳಲ್ಲಿ ಅಜೇಯ 70 ರನ್ ಗಳಿಸಿರುವ ಹಾರ್ದಿಕ್ ಪಾಂಡ್ಯ 23 ಸ್ಥಾನಗಳ ಬಡ್ತಿ ಪಡೆದು 65ಕ್ಕೆ ತಲುಪಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು