ದುಬೈ (ಪಿಟಿಐ): ಭಾರತ ತಂಡದ ವೇಗಿ ಜಸ್ಪ್ರೀತ್ ಬೂಮ್ರಾ ಅವರು ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ಬೌಲರ್ಗಳ ವಿಭಾಗದಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.

ಬುಧವಾರ ಪ್ರಕಟವಾಗಿರುವ ಪಟ್ಟಿಯಲ್ಲಿ ಭಾರತದಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಅವರು ಬ್ಯಾಟರ್ಗಳ ವಿಭಾಗದಲ್ಲಿ ಕ್ರಮವಾಗಿ 8 ಹಾಗೂ 9ನೇ ಸ್ಥಾನದಲ್ಲಿದ್ಧರೆ.

ಇಂಗ್ಲೆಂಡ್ನ ಬ್ಯಾಟರ್ ಜೋ ರೂಟ್ ಅವರು 880 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ನ ಹ್ಯಾರಿ ಬ್ರೂಕ್ ಎರಡನೇ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನಗಳಲ್ಲಿ ಟ್ರಾವಿಸ್ ಹೆಡ್ ಮತ್ತು ಸ್ಟೀವ್ ಸ್ಮಿತ್ ಇದ್ದಾರೆ.

ಭಾರತ ಹೋದ ನವೆಂಬರ್ನಲ್ಲಿ ದಕ್ಷಿಣ ಆಫ್ರಿಕಾ ಎದುರು ಟೆಸ್ಟ್ ಆಡಿತ್ತು. 2026ರಲ್ಲಿ ಇದುವರೆಗೆ ಒಂದೂ ಟೆಸ್ಟ್ ಆಡಿಲ್ಲ. ಆದರೂ ಬೂಮ್ರಾ ಅವರು 879 ಅಂಕಗಳೊಂದಿಗೆ ಮೊದಲ ಸ್ಥಾನ ವನ್ನು ಉಳಿಸಿಕೊಂಡಿದ್ದಾರೆ. ವೇಗಿ ಮೊಹಮ್ಮದ್ ಸಿರಾಜ್ 12ನೇ ಸ್ಥಾನದಲ್ಲಿದ್ಧಾರೆ. ಸ್ಪಿನ್ನರ್ ರವೀಂದ್ರ ಜಡೇಜ ಹಾಗೂ ಕುಲದೀಪ್ ಯಾದವ್ ಕ್ರಮವಾಗಿ 14 ಹಾಗೂ 15ನೇ ಸ್ಥಾನಗಳಲ್ಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-915896168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.