ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ICC ರ‍್ಯಾಂಕಿಂಗ್: ಆಲ್‌ರೌಂಡರ್ ಜಡೇಜಗೆ ಅಗ್ರಸ್ಥಾನ

Last Updated 9 ಮಾರ್ಚ್ 2022, 20:23 IST
ಅಕ್ಷರ ಗಾತ್ರ

ದುಬೈ: ಭಾರತದ ರವೀಂದ್ರ ಜಡೇಜ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ ಟೆಸ್ಟ್ ರ‍್ಯಾಂಕಿಂಗ್‌ನ ಆಲ್‌ರೌಂಡರ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

’ಮೊಹಾಲಿಯಲ್ಲಿ ಈಚೆಗೆ ನಡೆದ ಶ್ರೀಲಂಕಾ ಎದುರಿನ ಟೆಸ್ಟ್‌ನಲ್ಲಿ ಜಡೇಜ ಅವರ ಆಲ್‌ರೌಂಡ್ ಆಟದಿಂದ ಭಾರತ ಪಂದ್ಯ ಗೆದ್ದಿತ್ತು. ಅದರಿಂದಾಗಿ ಅವರು ಎಂಆರ್‌ಎಫ್ ಟೈರ್ಸ್ ಐಸಿಸಿ ಪುರುಷರ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ’ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೊಹಾಲಿಯಲ್ಲಿ ಅವರು ಅಜೇಯ ಶತಕ (175) ಮತ್ತು ಒಟ್ಟು ಒಂಬತ್ತು ವಿಕೆಟ್‌ಗಳನ್ನು ಗಳಿಸಿದ್ದರು. ಇದರಿಂದಾಗಿ ಅವರು ಅಗ್ರಸ್ಥಾನಕ್ಕೇರಿದರು. 2021ರ ಫೆಬ್ರುವರಿಯಿಂದ ಮೊದಲ ಸ್ಥಾನದಲ್ಲಿದ್ದ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಜಡೇಜ ಹಿಂದಿ ಕ್ಕಿದರು.2017ರಲ್ಲಿ ಜಡೇಜ ಒಂದು ವಾರ ಅಗ್ರಸ್ಥಾನ ಗಳಿಸಿದ್ದರು.

ಇದೇ ಪಟ್ಟಿಯಲ್ಲಿರುವಆರ್. ಅಶ್ವಿನ್ ಮೂರನೇ ಸ್ಥಾನ ಪಡೆದಿದ್ದಾರೆ. ಅಕ್ಷರ್ ಪಟೇಲ್ 14ನೇ ಸ್ಥಾನದಲ್ಲಿದ್ದಾರೆ. ಅವರು ಎರಡು ಸ್ಥಾನ ಕುಸಿತ ಕಂಡಿದ್ದಾರೆ. ಗಾಯಗೊಂಡಿರುವ ಅವರು ಮೊಹಾಲಿ ಟೆಸ್ಟ್‌ನಲ್ಲಿ ಆಡಿರಲಿಲ್ಲ. ಶಾರ್ದೂಲ್ ಠಾಕೂರ್ 19ನೇ ಸ್ಥಾನದಲ್ಲಿದ್ದಾರೆ.

ಬ್ಯಾಟರ್‌ಗಳ ವಿಭಾಗದಲ್ಲಿ ವಿರಾಟ್ ಕೊಹ್ಲಿ ಎರಡು ಸ್ಥಾನಗಳ ಬಡ್ತಿ ಪಡೆದು, ಐದನೇ ಸ್ಥಾನಕ್ಕೇರಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ವಿಕೆಟ್‌ಕೀಪರ್–ಬ್ಯಾಟರ್ ರಿಷಭ್ ಪಂತ್ 10ನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾದ ಮಾರ್ನಸ್ ಲಾಬುಷೇನ್ ಅವರು ಅಗ್ರಸ್ಥಾನದಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಭಾರತದ ಜಸ್‌ಪ್ರೀತ್ ಬೂಮ್ರಾ ಹತ್ತನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲಿಗರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT