ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: 4ನೇ ಸ್ಥಾನಕ್ಕೇರಿದ ಬುಮ್ರಾ, ಕುಸಿತ ಕಂಡ ಕೊಹ್ಲಿ

Last Updated 16 ಮಾರ್ಚ್ 2022, 10:22 IST
ಅಕ್ಷರ ಗಾತ್ರ

ದುಬೈ: ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟೆಸ್ಟ್ ರ‍್ಯಾಂಕಿಂಗ್‌ನ ಬೌಲಿಂಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

ಬೆಂಗಳೂರಿನಲ್ಲಿ ಈಚೆಗೆ ನಡೆದ ಶ್ರೀಲಂಕಾ ಎದುರಿನ ಪಿಂಕ್‌ ಬಾಲ್‌ ಟೆಸ್ಟ್‌ನಲ್ಲಿ ಬೂಮ್ರಾ ಅವರು 8 ವಿಕೆಟ್‌ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಪಂದ್ಯದಲ್ಲಿ ಭಾರತ 238 ರನ್‌ಗಳಿಂದ ಗೆಲುವು ಸಾಧಿಸಿತ್ತು.

ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್‌ ಆಗ್ರಸ್ಥಾನ ಪಡೆದಿದ್ದಾರೆ. ಟೀಮ್ ಇಂಡಿಯಾದ ಆರ್. ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ಕಗಿಸೊ ರಬಾಡ ಮೂರನೇ ಸ್ಥಾನದಲ್ಲಿದ್ದಾರೆ. ಶಾಹೀನ್ ಅಫ್ರಿದಿ, ಕೈಲ್ ಜೇಮಿಸನ್, ಟಿಮ್ ಸೌಥಿ, ಜೇಮ್ಸ್ ಆ್ಯಂಡರ್ಸನ್, ನೀಲ್ ವ್ಯಾಗ್ನರ್ ಮತ್ತು ಜೋಶ್ ಹ್ಯಾಜಲ್‌ವುಡ್ ಆಗ್ರ ಹತ್ತು ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಕಳೆದ 2 ವರ್ಷದಿಂದ ಶತಕ ಸಿಡಿಸಲು ಪರದಾಡುತ್ತಿದ್ದು, ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಆಸ್ಟ್ರೇಲಿಯಾದ ಮಾರ್ನಸ್ ಲಾಬುಶೇನ್ ಆಗ್ರಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ವಿಕೆಟ್ ಕೀಪರ್ ರಿಷಭ್ ಪಂತ್ ಹತ್ತನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ.

ಐಸಿಸಿ ಆಲ್‌ರೌಂಡರ್ ಪಟ್ಟಿಯಲ್ಲಿ ವೆಸ್ಟ್‌ ಇಂಡೀಸ್‌ನ ಜೇಸನ್ ಹೋಲ್ಡರ್‌ ಆಗ್ರಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ರವೀಂದ್ರ ಜಡೇಜ, ಆರ್. ಅಶ್ವಿನ್ ಎರಡು ಮತ್ತು ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT