ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರ‍್ಯಾಂಕಿಂಗ್‌: ಬೂಮ್ರಾ ಶ್ರೇಷ್ಠ ಸಾಧನೆ

Last Updated 27 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ದುಬೈ: ಭಾರತದ ವೇಗದ ಬೌಲರ್‌ ಜಸ್‌ಪ್ರೀತ್‌ ಬೂಮ್ರಾ ಅವರು ಮಂಗಳವಾರ ಬಿಡುಗಡೆಯಾಗಿರುವ ಐಸಿಸಿ ಟೆಸ್ಟ್‌ ಬೌಲರ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೇರಿದ್ದಾರೆ. ಇದು ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ.

ಭಾನುವಾರ ಮುಗಿದಿದ್ದ ವೆಸ್ಟ್‌ ಇಂಡೀಸ್‌ ಎದುರಿನ ಮೊದಲ ಟೆಸ್ಟ್‌ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಬೂಮ್ರಾ ಐದು ವಿಕೆಟ್‌ ಉರುಳಿಸಿದ್ದರು. ಈ ಮೂಲಕ ಟೆಸ್ಟ್‌ನಲ್ಲಿ ಅತಿ ವೇಗವಾಗಿ 50 ವಿಕೆಟ್‌ ಕಬಳಿಸಿದ ಭಾರತದ ಬೌಲರ್‌ ಎಂಬ ಹಿರಿಮೆಗೆ ಭಾಜನರಾಗಿದ್ದರು.

ಬಲಗೈ ಬೌಲರ್‌ ಬೂಮ್ರಾ ಅವರು ಪಟ್ಟಿಯಲ್ಲಿ ಒಟ್ಟು ಏಳು ಸ್ಥಾನ ಮೇಲೇರಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್‌ ಕಮಿನ್ಸ್‌ ಅಗ್ರಸ್ಥಾನ ಹೊಂದಿದ್ದಾರೆ.

ಕಗಿಸೊ ರಬಾಡ, ಜೇಮ್ಸ್‌ ಆ್ಯಂಡರ್‌ಸನ್‌, ವರ್ನಾನ್‌ ಫಿಲ್ಯಾಂಡರ್‌, ಟ್ರೆಂಟ್‌ ಬೌಲ್ಟ್‌ ಮತ್ತು ನೀಲ್‌ ವಾಗ್ನರ್‌ ಅವರು ಕ್ರಮವಾಗಿ ಎರಡರಿಂದ ಆರನೇ ಸ್ಥಾನಗಳಲ್ಲಿದ್ದಾರೆ.

ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ವಿರಾಟ್‌ ಕೊಹ್ಲಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಕೊಹ್ಲಿ ಖಾತೆಯಲ್ಲಿ 910 ಪಾಯಿಂಟ್ಸ್‌ ಇವೆ. ಆಸ್ಟ್ರೇಲಿಯಾದ ಸ್ಟೀವ್‌ ಸ್ಮಿತ್‌ (904) ನಂತರದ ಸ್ಥಾನ ಹೊಂದಿದ್ದಾರೆ.

ಭಾರತದ ಚೇತೇಶ್ವರ್‌ ಪೂಜಾರ ಮತ್ತು ನ್ಯೂಜಿಲೆಂಡ್‌ನ ಕೇನ್‌ ವಿಲಿಯಮ್ಸನ್‌ ಅವರು ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಗಳಲ್ಲಿ ಮುಂದುವರಿದಿದ್ದಾರೆ.

ವಿಂಡೀಸ್‌ ಎದುರಿನ ಮೊದಲ ಟೆಸ್ಟ್‌ನಲ್ಲಿ ಒಟ್ಟು 183ರನ್‌ ಗಳಿಸಿದ್ದ ಅಜಿಂಕ್ಯ ರಹಾನೆ 11ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ಅವರು ಒಟ್ಟು 10 ಸ್ಥಾನ ಪ್ರಗತಿ ಕಂಡಿದ್ದಾರೆ.

ಇಂಗ್ಲೆಂಡ್‌ನ ಬೆನ್‌ ಸ್ಟೋಕ್ಸ್‌ ಅವರು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 13ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT