ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಅಶ್ವಿನ್, ಜಡೇಜಗೆ ಅಗ್ರಸ್ಥಾನ

Published 23 ಆಗಸ್ಟ್ 2023, 14:14 IST
Last Updated 23 ಆಗಸ್ಟ್ 2023, 14:14 IST
ಅಕ್ಷರ ಗಾತ್ರ

ದುಬೈ: ಭಾರತದ ಆರ್. ಅಶ್ವಿನ್ ಮತ್ತು ರವೀಂದ್ರ ಜಡೇಜ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ.

ಅಶ್ವಿನ್ ಬೌಲರ್‌ಗಳ ವಿಭಾಗದಲ್ಲಿ ಹಾಗೂ ಜಡೇಜ ಆಲ್‌ರೌಂಡರ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಏಕದಿನ ಮತ್ತು ಟಿ20 ಮಾದರಿಗಳಲ್ಲಿ ಬಾಂಗ್ಲಾದ ಶಕೀಬ್ ಅಲ್ ಹಸನ್ ಅಗ್ರಸ್ಥಾನದಲ್ಲಿದ್ದಾರೆ. ಚುಟುಕು ಕ್ರಿಕೆಟ್‌ನಲ್ಲಿ ಹಾರ್ದಿಕ್ ಪಾಂಡ್ಯ ಎರಡನೇ ಸ್ಥಾನದಲ್ಲಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಯುವ ಆಟಗಾರ ಶುಭಮನ್ ಗಿಲ್  ನಾಲ್ಕನೇ ಸ್ಥಾನಕ್ಕೇರಿದ್ದಾರೆ.  ಬುಧವಾರ ಪ್ರಕಟವಾದ ಪಟ್ಟಿಯಲ್ಲಿ ವೇಗಿ ಜಸ್‌ಪ್ರೀತ್ ಬೂಮ್ರಾ ಹಾಗೂ ಸ್ಪಿನ್ನರ್ ರವಿ ಬಿಷ್ಣೋಯಿ ಟಿ20 ಕ್ರಿಕೆಟ್  ಬೌಲರ್‌ಗಳ ವಿಭಾಗದಲ್ಲಿ ಬಡ್ತಿ ಪಡೆದಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಗಿಲ್ ಖಾತೆಯಲ್ಲಿ ಈಗ 743 ಅಂಕಗಳು ಇವೆ. ಐರ್ಲೆಂಡ್ ಎದುರಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಆಡುತ್ತಿರುವ ಬೂಮ್ರಾ 84ನೇ ಸ್ಥಾನಕ್ಕೇರಿದ್ದಾರೆ. 7 ಸ್ಥಾನಗಳ ಬಡ್ತಿ ಗಳಿಸಿದ್ದಾರೆ. ಬಿಷ್ಣೋಯಿ 17 ಸ್ಥಾನಗಳ ಏರಿಕೆ ಗಳಿಸಿದ್ದಾರೆ. 65ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಬಾಬರ್ ಆಜಂ ಮತ್ತು ಇಮಾಮ್ ಉಲ್ ಹಕ್ ಅವರು ಕ್ರಮವಾಗಿ ಮೊದಲ ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ.

ಐರ್ಲೆಂಡ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ 58 ರನ್ ಗಳಿಸಿದ್ದ ಋತುರಾಜ್ ಗಾಯಕವಾಡ್ 143 ರಿಂದ 87ನೇ ಸ್ಥಾನಕ್ಕೆ ಸಾಗಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT