ಗುರುವಾರ , ಏಪ್ರಿಲ್ 15, 2021
31 °C

ICC Test Rankings: ಜೀವನಶ್ರೇಷ್ಠ 7ನೇ ಸ್ಥಾನಕ್ಕೆ ಜಿಗಿದ ರಿಷಭ್ ಪಂತ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದುಬೈ: ಅಂತರ ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ತಾಜಾ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಜೀವನಶ್ರೇಷ್ಠ 7ನೇ ಸ್ಥಾನಕ್ಕೆ ಜಿಗಿದಿದ್ದಾರೆ. 

ಇಂಗ್ಲೆಂಡ್ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಶತಕ ಬಾರಿಸಿರುವ ರಿಷಭ್ ಪಂತ್, ಏಳು ಸ್ಥಾನಗಳ ಭರ್ಜರಿ ನೆಗೆತ ಕಂಡು 7ನೇ ಸ್ಥಾನ ವಶಪಡಿಸಿದರು. 

ಅಲ್ಲದೆ ಭಾರತದ ಬಲಗೈ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಜೊತೆಗೆ ಏಳನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಇನ್ನೊಂದೆಡೆ ರೋಹಿತ್ ಶರ್ಮಾ ಕೂಡಾ ಒಂದು ಸ್ಥಾನದ ಬಡ್ತಿ ಪಡೆದಿದ್ದಾರೆ.

 

 

 

747 ರೇಟಿಂಗ್ ಪಾಯಿಂಟ್ ಗಿಟ್ಟಿಸಿರುವ ಪಂತ್, ಟೆಸ್ಟ್‌ನಲ್ಲಿ ವೈಯಕ್ತಿಕ ಗರಿಷ್ಠ ಶ್ರೇಯಾಂಕ ಗಳಿಸಿದ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಇದನ್ನೂ ಓದಿ: 

 

ಈ ನಡುವೆ ಟಾಪ್ 10ರ ಪಟ್ಟಿಯ ಪೈಕಿ ಐದನೇ ಸ್ಥಾನದಲ್ಲಿರುವ ನಾಯಕ ವಿರಾಟ್ ಕೊಹ್ಲಿ (814) ಶ್ರೇಯಾಂಕದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಈ ವಿಭಾಗವನ್ನು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ (919 ರೇಟಿಂಗ್ ಪಾಯಿಂಟ್) ಮುನ್ನಡೆಸುತ್ತಿದ್ದು, ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ (891) ದ್ವಿತೀಯ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಭಾರತದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಒಂದು ಸ್ಥಾನ ಏರಿಕೆ ಕಂಡು ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. 850 ರೇಟಿಂಗ್ ಪಾಯಿಂಟ್ ಪಡೆದಿರುವ ಅಶ್ವಿನ್, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 32 ವಿಕೆಟ್‌ಗಳನ್ನು ಕಬಳಿಸಿ ಸರಣಿಶ್ರೇಷ್ಠ ಗೌರವಕ್ಕೆ ಭಾಜನವಾಗಿದ್ದರು.

 

 

 

ಬೌಲಿಂಗ್ ವಿಭಾಗವನ್ನು ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ (908) ಮುನ್ನಡೆಸುತ್ತಿದ್ದಾರೆ. ಜಸ್‌ಪ್ರೀತ್ ಬೂಮ್ರಾ (739) ಒಂದು ಸ್ಥಾನ ಇಳಿಕೆ ಕಂಡರೂ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: 

 

ಇಂಗ್ಲೆಂಡ್ ಸರಣಿಯಲ್ಲಿ ಶತಕ ಸಾಧನೆ ಮಾಡಿರುವ ಅಶ್ವಿನ್, ಟೆಸ್ಟ್ ಆಲ್‌ರೌಂಡರ್ ಪಟ್ಟಿಯಲ್ಲೂ ಒಂದು ಸ್ಥಾನ ಬಡ್ತಿ ಪಡೆದು ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ಈ ವಿಭಾಗದಲ್ಲಿ ಭಾರತದ ರವೀಂದ್ರ ಜಡೇಜಾ ಒಂದು ಸ್ಥಾನ ಇಳಿಕೆ ಕಂಡು ಮೂರನೇ ಸ್ಥಾನದಲ್ಲಿದ್ದಾರೆ. ಅತ್ತ ಬೆನ್ ಸ್ಟೋಕ್ ಒಂದು ಸ್ಥಾನ ಏರಿಕೆ ಕಂಡು ಎರಡನೇ ಸ್ಥಾನ ಪಡೆದಿದ್ದಾರೆ.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು