ದುಬೈ: ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರು ಮಂಗಳವಾರ ಬಿಡುಗಡೆಯಾದ ಐಸಿಸಿ ಮಹಿಳಾ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಏಳನೇ ಸ್ಥಾನಕ್ಕೆ ಏರಿಕ್ಕೇರಿದ್ದಾರೆ. ಉಪನಾಯಕಿ ಸ್ಮೃತಿ ಮಂದಾನ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ಎಂಟನೇ ಸ್ಥಾನದಲ್ಲಿದ್ದ ಹರ್ಮನ್ ಅವರು ಒಂದು ಸ್ಥಾನ ಬಡ್ತಿ ಪಡೆದಿದ್ದಾರೆ. ನ್ಯೂಜಿಲೆಂಡ್ನ ಸೋಫಿ ಡಿವೈನ್ ಎರಡು ಸ್ಥಾನ ಕುಸಿತ ಕಂಡು ಒಂಬತ್ತನೇ ಸ್ಥಾನದಲ್ಲಿದ್ದಾರೆ. ಜಿಮಿಮಾ ರಾಡ್ರಿಗಸ್ ಅವರು 12ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 94 ರನ್ ಬಾರಿಸಿದ ನ್ಯೂಜಿಲೆಂಡ್ನ ಬ್ಯಾಟರ್ ಮ್ಯಾಡಿ ಗ್ರೀನ್ ಅವರು ಐದು ಸ್ಥಾನಗಳ ಬಡ್ತಿಯೊಂದಿಗೆ 17ನೇ ಸ್ಥಾನಕ್ಕೇರಿದ್ದಾರೆ. ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಕಿವೀಸ್ 3–0ಯಿಂದ ಕೈವಶಮಾಡಿಕೊಂಡಿದೆ. ಸರಣಿಯಲ್ಲಿ ಆಲ್ರೌಂಡ್ ಪ್ರದರ್ಶನದ ಮೂಲಕ ಸರಣಿಯ ಆಟಗಾರ್ತಿ ಗೌರವಕ್ಕೆ ಪಾತ್ರವಾದ ಅಮೆಲಿಯಾ ಕೆರ್ ಅವರು ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಎರಡು ಸ್ಥಾನಗಳ ಬಡ್ತಿಯೊಂದಿಗೆ 19ನೇ ಸ್ಥಾನ ಗಳಿಸಿದ್ದಾರೆ.

ಟಿ20 ರ್ಯಾಂಕಿಂಗ್ನಲ್ಲಿ ಅಮೆಲಿಯಾ ವೃತ್ತಿಜೀವನದ ಅತ್ಯುತ್ತಮ 694 ರೇಟಿಂಗ್ ಅಂಕಗಳನ್ನು ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ 44 ಎಸೆತಗಳಲ್ಲಿ 78 ರನ್ ಗಳಿಸಿದ್ದರು. ಬ್ಯಾಟಿಂಗ್ನಲ್ಲಿ 8ನೇ ಮತ್ತು ಬೌಲಿಂಗ್ನಲ್ಲಿ 12ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.