ಶುಕ್ರವಾರ, ಏಪ್ರಿಲ್ 3, 2020
19 °C

ಅಗ್ರಸ್ಥಾನ ಕಳೆದುಕೊಂಡ ಶಫಾಲಿ

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಭಾರತದ ಶಫಾಲಿ ವರ್ಮಾ, ಸೋಮವಾರ ಐಸಿಸಿ ಪ್ರಕಟಿಸಿರುವ ಟ್ವೆಂಟಿ–20 ಬ್ಯಾಟ್ಸ್‌ವುಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಳೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಶಫಾಲಿ ಕೇವಲ ಎರಡು ರನ್‌ ಗಳಿಸಿದ್ದರು. ಹೀಗಾಗಿ ಅವರು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಆಸ್ಟ್ರೇಲಿಯಾದ ಬೆಥ್‌ ಮೂನಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅವರು ಮೊದಲ ಬಾರಿ ಈ ಸಾಧನೆ ಮಾಡಿದ್ದಾರೆ. ಫೈನಲ್‌ ಪಂದ್ಯದಲ್ಲಿ ಅಜೇಯ 78ರನ್‌ ದಾಖಲಿಸಿದ್ದ ಮೂನಿ ಎರಡು ಸ್ಥಾನ ಪ್ರಗತಿ ಕಂಡಿದ್ದಾರೆ. ಅವರ ಖಾತೆಯಲ್ಲಿ ಒಟ್ಟು 762 ಪಾಯಿಂಟ್ಸ್‌ ಇವೆ. ವಿಶ್ವಕಪ್‌ನಲ್ಲಿ ಅವರು ಆರು ಇನಿಂಗ್ಸ್‌ಗಳಿಂದ 259ರನ್‌ ಕಲೆಹಾಕಿ ‘ಟೂರ್ನಿಯ ಶ್ರೇಷ್ಠ ಆಟಗಾರ್ತಿ’ ಗೌರವ ಗಳಿಸಿದ್ದರು.

ನ್ಯೂಜಿಲೆಂಡ್‌ನ ಸೂಜಿ ಬೇಟ್ಸ್‌ (750 ಪಾಯಿಂಟ್ಸ್‌) ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಭಾರತ ತಂಡದ ಉಪ ನಾಯಕಿ ಸ್ಮೃತಿ ಮಂದಾನ ಒಂದು ಸ್ಥಾನ ಕಳೆದುಕೊಂಡಿದ್ದಾರೆ. ಅವರೀಗ ಏಳನೇ ಸ್ಥಾನದಲ್ಲಿದ್ದಾರೆ. ಜೆಮಿಮಾ ರಾಡ್ರಿಗಸ್‌ ಒಂಬತ್ತನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾದ ಆರಂಭಿಕ ಆಟಗಾರ್ತಿ ಅಲಿಸಾ ಹೀಲಿ ಐದನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಅವರು ಎರಡು ಸ್ಥಾನ ಪ್ರಗತಿ ಕಂಡಿದ್ದಾರೆ.

ಭಾರತದ ದೀಪ್ತಿ ಶರ್ಮಾ, 53ರಿಂದ 43ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅವರು ಮೊದಲ ಬಾರಿಗೆ ಅಗ್ರ ಐದರೊಳಗೆ (5) ಸ್ಥಾನ ಪಡೆದಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ದೀಪ್ತಿ, ರಾಧಾ ಯಾದವ್‌ ಮತ್ತು ಪೂನಮ್‌ ಯಾದವ್‌ ಅವರು ಕ್ರಮವಾಗಿ ಆರರಿಂದ ಎಂಟನೇ ಸ್ಥಾನಗಳಲ್ಲಿದ್ದಾರೆ. ಇಂಗ್ಲೆಂಡ್‌ ತಂಡದ ಆಟಗಾರ್ತಿ ಸೋಫಿ ಎಕ್ಸ್ಲೆಸ್ಟೋನ್‌ ಅಗ್ರಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು