ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಟಿ20 ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 18 ರನ್ ಜಯ

Last Updated 24 ಫೆಬ್ರುವರಿ 2020, 14:28 IST
ಅಕ್ಷರ ಗಾತ್ರ

ಪರ್ತ್‌: ಟಿ20 ವಿಶ್ವಕಪ್‌ ಟೂರ್ನಿಯ ಬಾಂಗ್ಲಾದೇಶ ವಿರುದ್ಧದಪಂದ್ಯದಲ್ಲಿ ಭಾರತ ವನಿತೆಯರ ತಂಡ 18 ರನ್‌ ಅಂತರದ ಗೆಲುವು ಸಾಧಿಸಿದೆ.

ಇಲ್ಲಿನ ವಾಕಾ (ವೆಸ್ಟರ್ನ್‌ ಆಸ್ಟ್ರೇಲಿಯಾ ಕ್ರಿಕೆಟ್ ಅಸೋಸಿಯೇಷನ್‌) ಕ್ರೀಡಾಂಗಣದಲ್ಲಿ ನಡೆದಪಂದ್ಯದಲ್ಲಿ ಟಾಸ್‌ ಗೆದ್ದ ಬಾಂಗ್ಲಾ ಪಡೆ, ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಅದರಂತೆ ಬ್ಯಾಟಿಂಗ್‌ ಆರಂಭಿಸಿದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 142 ರನ್‌ ಪೇರಿಸಿತು.

ಭಾರತ ಪರ ಶಫಾಲಿ ವರ್ಮಾ (39),ಜೆಮಿಯಾ ರಾಡ್ರಿಗಸ್‌ (34) ಹಾಗೂಕರ್ನಾಟಕದ ಆಟಗಾರ್ತಿ ವೇದಾ ಕೃಷ್ಣಮೂರ್ತಿ (22) ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಿ ನೆರವಾದರು.

ಈ ಮೊತ್ತದೆದುರು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾ ಪಡೆ, 8 ವಿಕೆಟ್‌ ಕಳೆದುಕೊಂಡು 124ರನ್‌ ಗಳಿಸಲಷ್ಟೇ ಶಕ್ತವಾಯಿತು. ಆರಂಭಿಕ ಆಟಗಾರ್ತಿ ಮುರ್ಷಿದಾಖಾತುನ್‌ (30) ಹಾಗೂ ನಿಗರ್‌ ಸುಲ್ತಾನಾ (35) ಹೊರತುಪಡಿಸಿ ಉಳಿದವರಿಂದ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ಮೂಡಿಬರಲಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 4 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿಭಾಯಿಸಿದ್ದಪೂನಂ ಯಾದವ್‌, ಇಲ್ಲೂ 3 ವಿಕೆಟ್‌ ಪಡೆದುಮಿಂಚಿದರು. ವೇಗಿ ಶಿಖಾ ಪಾಂಡೆ ಹಾಗೂ ಅರುಂಧತಿ ರೆಡ್ಡಿ ತಲಾಎರಡು ವಿಕೆಟ್‌ ಪಡೆದರು. ಇನ್ನೊಂದು ವಿಕೆಟ್‌ ರಾಜೇಶ್ವರಿ ಗಾಯಕವಾಡ್‌ ಅವರಿಗೆ ಸಿಕ್ಕಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT