ಶುಕ್ರವಾರ, ಜುಲೈ 1, 2022
28 °C

Womens World Cup: ದಕ್ಷಿಣ ಆಫ್ರಿಕಾಗೆ 275 ರನ್ ಗುರಿ ನೀಡಿದ ಭಾರತ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕ್ರೈಸ್ಟ್‌ಚರ್ಚ್‌: ಆರಂಭಿಕ ಆಟಗಾರ್ತಿಯರಾದ ಶೆಫಾಲಿ ವರ್ಮಾ, ಸ್ಮೃತಿ ಮಂದಾನ ಹಾಗೂ ನಾಯಕಿ ಮಿಥಾಲಿ ರಾಜ್ ಗಳಿಸಿದ ಅರ್ಧಶತಕಗಳ ಬಲದಿಂದ ಭಾರತ ಮಹಿಳೆಯರ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸವಾಲಿನ ಮೊತ್ತ ಕಲೆಹಾಕಿದೆ.

ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಲಭಿಸಿತು. ಶೆಫಾಲಿ ಮತ್ತು ಸ್ಮೃತಿ ಜೋಡಿ ಮೊದಲ ವಿಕೆಟ್‌ಗೆ 15 ಓವರ್‌ಗಳಲ್ಲಿ 90 ರನ್ ಕಲೆ ಹಾಕಿತು.

ಶೆಫಾಲಿ, 46 ಎಸೆತಗಳಲ್ಲಿ 53 ರನ್‌ ಗಳಿಸಿದ್ದಾಗ ರನೌಟ್ ಆದರು. ಮೂರನೇ ಕ್ರಮಾಂಕದಲ್ಲಿ ಬಂದ ಯುವ ಆಟಗಾರ್ತಿ ಯಸ್ತಿಕಾ ಭಾಟಿಯಾ ಕೇವಲ 2 ರನ್ ಗಳಿಸಿ ಔಟಾದರು. ಆಫ್ರಿಕಾ ತಂಡ, ಈ ವೇಳೆ ಮೇಲುಗೈ ಸಾಧಿಸುವ ನಿರೀಕ್ಷೆಯಲ್ಲಿತ್ತು.

ಆದರೆ, ಮಂದಾನ ಮತ್ತು ನಾಯಕಿ ಮಿಥಾಲಿ ಅದಕ್ಕೆ ಅವಕಾಶ ನೀಡಲಿಲ್ಲ. ಈ ಇಬ್ಬರು ನಾಲ್ಕನೇ ವಿಕೆಟ್‌ ಜೊತೆಯಾಟದಲ್ಲಿ 80 ರನ್‌ ಸೇರಿಸಿದರು. ಮಂದಾನ 84 ಎಸೆತಗಳಲ್ಲಿ 71 ರನ್ ಗಳಿಸಿದರೆ, ಮಿಥಾಲಿ 84 ಎಸೆತಗಳಲ್ಲಿ 68 ರನ್ ಬಾರಿಸಿದರು.

ಕೊನೆಯಲ್ಲಿ ಹರ್ಮನ್‌ ಪ್ರೀತ್‌ (48) ಉಪಯುಕ್ತ ಕಾಣಿಕೆ ನೀಡಿದರು. ಇದರಿಂದಾಗಿ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 274ರನ್‌ ಕಲೆ ಹಾಕಲು ಸಾಧ್ಯವಾಯಿತು.

ಆಫ್ರಿಕಾ ಪರ ಇಬ್ರಾಹಿಂ ಇಸ್ಮಾಯಿಲ್ ಮತ್ತು ಮಸಾಬಟ ಕ್ಲಾಸ್ ತಲಾ ಎರಡು ಮತ್ತು ಅಯಬೊಂಗ ಖಾಕ, ಕ್ಲೋಯ್ ಟ್ರಯಾನ್ ಒಂದೊಂದು ವಿಕೆಟ್‌ ಉರುಳಿಸಿದರು.

ಈ ಪಂದ್ಯದಲ್ಲಿ ಗೆದ್ದರೆ ಭಾರತ ಸೆಮಿಫೈನಲ್‌ ಪ್ರವೇಶಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು