ನವಿ ಮುಂಬೈ: ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು (ಸೋಮವಾರ) ನಡೆಯುತ್ತಿರುವ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ.

ನವಿ ಮುಂಬೈಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾದ ನಾಯಕಿ ಚಮರಿ ಅಟ್ಟಪಟ್ಟು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಶ್ರೀಲಂಕಾ ಟೂರ್ನಿಯಲ್ಲಿ ಮೊದಲ ಜಯದ ಹುಡುಕಾಟದಲ್ಲಿದೆ. ಇದುವರೆಗೆ ಆಡಿರುವ ಐದು ಪಂದ್ಯಗಳ ಪೈಕಿ ಮೂರು ಸೋಲು ಕಂಡಿದೆ. ಎರಡು ಪಂದ್ಯ ಮಳೆಯಿಂದ ರದ್ದಾದ ಕಾರಣ ಎರಡು ಅಂಕಗಳನ್ನು ಗಳಿಸಿದೆ. ಅಲ್ಲದೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಅತ್ತ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲಿರುವ ಬಾಂಗ್ಲಾದೇಶ, ಐದು ಪಂದ್ಯಗಳ ಪೈಕಿ ಒಂದು ಗೆಲುವು ಹಾಗೂ ನಾಲ್ಕರಲ್ಲಿ ಸೋಲು ಕಂಡಿದೆ. ಇತ್ತಂಡಗಳಿಗೂ ಸೆಮಿಫೈನಲ್ ಪ್ರವೇಶಿಸುವ ಸಾಧ್ಯತೆ ಕ್ಷೀಣವಾಗಿದೆ.
.ICC Women's WC | ಹೀದರ್ ಶತಕ, ಸೆಮಿಗೆ ಇಂಗ್ಲೆಂಡ್: ಭಾರತಕ್ಕೆ ಸೋಲು.ICC Women's WC: ಉಳಿದಿರುವುದು 3 ಪಂದ್ಯ; ಸೆಮೀಸ್ಗೆ ಪ್ರವೇಶಿಸಬಹುದೇ ಭಾರತ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.