ಇಂದೋರ್: ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 245 ರನ್ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡವು 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಆರಂಭಿಕ ಆಟಗಾರ್ತಿ ಟಮ್ಮಿ ಬ್ಯೂಮಾಂಟ್ ಅವರ ಆಕರ್ಷಕ ಅರ್ಧಶತಕದ (78 ರನ್, 105 ಎಸೆತ) ನೆರವಿನಿಂದ 50 ಓವರ್ಗಳ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 244 ರನ್ ಗಳಿಸಿತು.

245 ರನ್ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಆರಂಭಿಕ ಆಘಾತ ಅನುಭವಿಸಿದರು ಕೂಡ ಆಶ್ಲೇ ಗಾರ್ಡ್ನರ್ ಅವರ ಆಕರ್ಷಕ ಶತಕದ ನೆರವಿನಿಂದ 40.3 ಓವರ್ಗಳಲ್ಲೇ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.

ಐದನೇ ವಿಕೆಟ್ಗೆ ಜೊತೆಯಾದ ಆಶ್ಲೇ ಗಾರ್ಡ್ನರ್ ಅವರ ಅಜೇಯ 104 ರನ್ (73 ಎಸೆತ) ಹಾಗೂ ಅನ್ನಾಬೆಲ್ ಸದರ್ಲ್ಯಾಂಡ್ ಅವರ ಅಜೇಯ 98 ರನ್(112 ಎಸೆತ) ಆಸೀಸ್ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇಂಗ್ಲೆಂಡ್ ವಿರುದ್ಧ 6 ವಿಕೆಟ್ಗಳ ಜಯ ಸಾಧಿಸುವ ಮೂಲಕ, ಆಸ್ಟ್ರೇಲಿಯಾ ತಂಡವು ಈ ಬಾರಿಯ ವಿಶ್ವಕಪ್ನಲ್ಲಿ ಅಜೇಯವಾಗಿ ಉಳಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.