ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ICC World Cup: ವೀಕ್ಷಕ ವಿವರಣೆಗಾರರಾಗಿ ರವಿ ಶಾಸ್ತ್ರಿ– ಗವಾಸ್ಕರ್ ಕಣಕ್ಕೆ

Published 30 ಸೆಪ್ಟೆಂಬರ್ 2023, 2:42 IST
Last Updated 30 ಸೆಪ್ಟೆಂಬರ್ 2023, 2:42 IST
ಅಕ್ಷರ ಗಾತ್ರ

ನವದೆಹಲಿ: ಅಕ್ಟೋಬರ್ 5ರಿಂದ ಪ್ರಾರಂಭವಾಗುವ ಮುಂಬರುವ ಏಕದಿನ ವಿಶ್ವಕಪ್‌ಗಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶುಕ್ರವಾರ ವೀಕ್ಷಕ ವಿವರಣೆಗಾರರನ್ನು ಪ್ರಕಟಿಸಿದೆ.

ಭಾರತದ ರವಿ ಶಾಸ್ತ್ರಿ, ಸುನಿಲ್ ಗವಾಸ್ಕರ್, ಆಸ್ಟ್ರೇಲಿಯಾದ ಹಿರಿಯ ಆಟಗಾರರಾದ ಮ್ಯಾಥ್ಯೂ ಹೇಡನ್, ಶೇನ್ ವ್ಯಾಟ್ಸನ್, ಆ್ಯರನ್‌ ಫಿಂಚ್, ಆಸ್ಟ್ರೇಲಿಯಾದ ಹಿರಿಯ ಆಟಗಾರ್ತಿ ಲಿಸಾ ಸ್ಥಳೇಕರ್, ಪಾಕಿಸ್ತಾನದ ಹಿರಿಯ ಆಟಗಾರ ರಮೀಜ್‌ ರಾಜಾ ಅವರು ವೀಕ್ಷಕ ವಿವರಣೆಗಾರರಾಗಿ ಆಯ್ಕೆಯಾಗಿದ್ದಾರೆ.

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ 2019ರ ವಿಶ್ವಕಪ್ ಫೈನಲ್‌ನಲ್ಲಿ ವೀಕ್ಷಕ ವಿವರಣೆಗಾರರಾಗಿದ್ದ ನಾಸರ್ ಹುಸೇನ್, ಇಯಾನ್ ಸ್ಮಿತ್‌ ಮತ್ತು ಇಯಾನ್ ಬಿಷಪ್ ಅವರೂ ಸಹ ಈ ಬಾರಿ ಕಾಣಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ವಕಾರ್‌ ಯೂನಿಸ್‌, ಶಾನ್ ಪೊಲಾಕ್, ಅಂಜುಮ್ ಚೋಪ್ರಾ, ಮೈಕೆಲ್ ಅಥರ್ಟನ್, ಕೇಟಿ ಮಾರ್ಟಿನ್, ಸಂಜಯ್ ಮಂಜ್ರೇಕರ್, ದಿನೇಶ್ ಕಾರ್ತಿಕ್ ಸೇರಿದಂತೆ ಹೆಚ್ಚಿನ ಅಂತರರಾಷ್ಟ್ರೀಯ ಐಕಾನ್‌ಗಳು ಮತ್ತು ಮಾಜಿ ನಾಯಕರು ಕಾಮೆಂಟರಿ ಬಾಕ್ಸ್‌ನಲ್ಲಿ ಇರಲಿದ್ದಾರೆ.

ಅ.5ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದೊಂದಿಗೆ ವಿಶ್ವಕಪ್ ಟೂರ್ನಿಗೆ ಚಾಲನೆ ದೊರೆಯಲಿದೆ.

ಅ.8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ನ.19ರಂದು ಅಹಮದಾಬಾದ್‌ನಲ್ಲಿ ಫೈನಲ್‌ ಪಂದ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT