ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಹ್ಲಿ ವಿಶ್ವಕಪ್ ಎತ್ತಿ ಹಿಡಿಯುವುದನ್ನು ಇಡೀ ದೇಶವೇ ಎದುರು ನೋಡುತ್ತಿದೆ: ಸೆಹ್ವಾಗ್

Published 27 ಜೂನ್ 2023, 12:32 IST
Last Updated 27 ಜೂನ್ 2023, 12:32 IST
ಅಕ್ಷರ ಗಾತ್ರ

ನವದೆಹಲಿ: ಟೀಮ್ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಅವರು ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವುದನ್ನು ನೋಡಲು ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದೆ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡಿರುವ ಅವರು, ‘ಕೊಹ್ಲಿ ಯಾವಾಗಲೂ ಆಟದಲ್ಲಿ ಶೇ 100ರಷ್ಟು ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಜತೆಗೆ ರನ್‌ ಗಳಿಸಲು ಸದಾ ಪ್ರಯತ್ನಿಸುತ್ತಿರುತ್ತಾರೆ’ ಎಂದು ಹೇಳಿದ್ದಾರೆ.

‘ನಾವು 2011ರ ವಿಶ್ವಕಪ್ ಅನ್ನು ಸಚಿನ್ ತೆಂಡೂಲ್ಕರ್‌ಗಾಗಿ ಆಡಿದ್ದೇವೆ. ಈಗ ವಿರಾಟ್ ಕೊಹ್ಲಿ ಅವರು ಸಚಿನ್ ಹಾದಿಯಲ್ಲಿದ್ದಾರೆ. ಎಲ್ಲರೂ ಕೊಹ್ಲಿಗಾಗಿ ವಿಶ್ವಕಪ್ ಗೆಲ್ಲುವುದಕ್ಕಾಗಿ ಆಡಲಿದ್ದಾರೆ’ ಎಂದು ಸೆಹ್ವಾಗ್ ತಿಳಿಸಿದ್ದಾರೆ.

‘ವಿರಾಟ್ ಕೊಹ್ಲಿ ಕೂಡ ವಿಶ್ವಕಪ್‌ನತ್ತ ಎದುರು ನೋಡುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಲಕ್ಷಾಂತರ ಅಭಿಮಾನಿಗಳು ಅವರ ಆಟವನ್ನು ನೋಡುತ್ತಾರೆ. ಪಿಚ್‌ಗಳು ಹೇಗೆ ವರ್ತಿಸುತ್ತವೆ ಎಂದು ವಿರಾಟ್‌ಗೆ ತಿಳಿದಿದೆ. ವಿಶ್ವಕಪ್ ಗೆಲ್ಲುವ ಉದ್ದೇಶದಿಂದ ಅವರ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂಬ ವಿಶ್ವಾಸ ನನಗಿದೆ’ ಎಂದು ಸೆಹ್ವಾಗ್ ಹೇಳಿಕೊಂಡಿದ್ದಾರೆ.

2011ರಲ್ಲಿ ಎಂ.ಎಸ್. ಧೋನಿ ನಾಯಕತ್ವದಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆದ್ದು ಸಾಧನೆ ಮಾಡಿತ್ತು. ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್‌, ವಿರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ವಿರಾಟ್ ಕೊಹ್ಲಿ ಸೇರಿದಂತೆ ಅನೇಕರು ಪ್ರಮುಖ ಪಾತ್ರವಹಿಸಿದ್ದರು.

ಟೀಮ್ ಇಂಡಿಯಾದ ಪ್ರಮುಖ ಆಟಗಾರರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ 274 ಏಕದಿನ ಪಂದ್ಯಗಳಲ್ಲಿ 12,898 ರನ್ ಗಳಿಸಿದ್ದಾರೆ. 2019ರ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ ನಾಯಕತ್ವದ ಭಾರತ ತಂಡ ಸೆಮಿಫೈನಲ್‌ನಲ್ಲಿ ಮುಗ್ಗರಿಸಿತ್ತು.

ಇದನ್ನೂ ಓದಿ... ICC World Cup–2023: ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳ ಮಾಹಿತಿ ಇಲ್ಲಿದೆ

ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಇಂದು ಬಿಡುಗಡೆ ಮಾಡಿದೆ.

ಅಕ್ಟೋಬರ್‌ 5ರಿಂದ ನವೆಂಬರ್‌ 19ರ ವರೆಗೆ ನಡೆಯುವ ಈ ಟೂರ್ನಿಯು ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್‌ ಆಯೋಜನೆಗೊಳ್ಳಲಿದೆ.

ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್‌ ಮತ್ತು ನ್ಯೂಜಿಲೆಂಡ್‌ ತಂಡಗಳು ಕಣಕ್ಕಿಳಿಯಲಿವೆ. ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್‌ 8ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈ ಹಣಾಹಣಿಯು ಐದು ಬಾರಿಯ ಚಾಂಪಿಯನ್‌ ಆಸ್ಟ್ರೇಲಿಯಾ ಎದುರು ಚೆನ್ನೈನಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT