ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಮ್ರಾನ್ ತಾಹಿರ್‌ ನಿವೃತ್ತಿ ನಿರ್ಧಾರ

Last Updated 4 ಮಾರ್ಚ್ 2019, 19:37 IST
ಅಕ್ಷರ ಗಾತ್ರ

ಜೊಹಾನ್ಸ್‌ಬರ್ಗ್‌ : ದಕ್ಷಿಣ ಆಫ್ರಿಕಾದ ಹಿರಿಯ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ ವಿಶ್ವಕಪ್ ಟೂರ್ನಿ ನಂತರ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಟ್ವೆಂಟಿ–20 ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ಅವರು ತಿಳಿಸಿದ್ದಾರೆ.

ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ತಾಹಿರ್‌ ‘ಏಕದಿನ ಕ್ರಿಕೆಟ್‌ನಿಂದ ದೂರ ಉಳಿಯುವುದು ಕಷ್ಟ. ಆದರೂ ಅನಿವಾರ್ಯವಾಗಿ ಈ ನಿರ್ಧಾರ ಕೈಗೊಳ್ಳಬೇಕಾಗಿ ಬಂದಿದೆ’ ಎಂದಿದ್ದಾರೆ.

ಒಟ್ಟು 95 ಏಕದಿನ ಪಂದ್ಯಗಳನ್ನು ಆಡಿರುವ ತಾಹಿರ್‌ 156 ವಿಕೆಟ್ ಕಬಳಿಸಿದ್ದಾರೆ. 2011 ಮತ್ತು 2015ರ ವಿಶ್ವಕಪ್‌ ಟೂರ್ನಿಗಳಲ್ಲಿ ಅವರು ಆಡಿದ್ದಾರೆ. 2014 ಮತ್ತು 2016ರ ಟ್ವೆಂಟಿ–20 ವಿಶ್ವಕಪ್‌ ಟೂರ್ನಿಗಳಲ್ಲೂ ಕಣಕ್ಕೆ ಇಳಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT