ಮಂಗಳವಾರ, ಮಾರ್ಚ್ 21, 2023
25 °C

ಮುಂದಿನ ಮಾರ್ಚ್‌ನಲ್ಲಿ ಮಹಿಳಾ ಐಪಿಎಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಾಕಷ್ಟು ನಿರೀಕ್ಷೆ ಮೂಡಿಸಿರುವ ಮಹಿಳಾ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಐಪಿಎಲ್‌) ಟಿ20 ಕ್ರಿಕೆಟ್‌ ಲೀಗ್‌ 2023ರ ಮಾರ್ಚ್‌ ತಿಂಗಳಲ್ಲಿ ನಡೆಯಲಿದೆ.

‘ಡಬ್ಲ್ಯುಐಪಿಎಲ್‌ ಚೊಚ್ಚಲ ಋತುವಿನ ಟೂರ್ನಿ ಮುಂದಿನ ವರ್ಷ ಮಾರ್ಚ್‌ ಮೊದಲ ವಾರ ಆರಂಭವಾಗಲಿದೆ. ಈ ಅವಧಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ ವೇಳಾಪಟ್ಟಿಯಲ್ಲಿ ಇತರ ಸರಣಿ, ಟೂರ್ನಿಗಳು ಇರುವುದಿಲ್ಲ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ದಕ್ಷಿಣ ಆಫ್ರಿಕಾದಲ್ಲಿ ಮುಂದಿನ ಫೆ. 9 ರಿಂದ 26ರ ವರೆಗೆ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ ನಡೆಯಲಿದೆ. ಆ ಟೂರ್ನಿಯ ಬೆನ್ನಲ್ಲೇ ಡಬ್ಲ್ಯುಐಪಿಎಲ್‌ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದಿದ್ದಾರೆ.

‘ಮೊದಲ ವರ್ಷ ಐದು ತಂಡಗಳು ಪಾಲ್ಗೊಳ್ಳಲಿವೆ. ಹಲವು ಹೂಡಿಕೆದಾರರು ಆಸಕ್ತಿ ತೋರಿರುವ ಕಾರಣ ತಂಡಗಳ ಸಂಖ್ಯೆ ಹೆಚ್ಚುವ ಸಾಧ್ಯತೆಯೂ ಇದೆ’ ಎಂದು ಹೇಳಿದ್ದಾರೆ.

ಐಪಿಎಲ್‌ ಫ್ರಾಂಚೈಸಿಗಳಾದ ಮುಂಬೈ ಇಂಡಿಯನ್ಸ್‌, ರಾಜಸ್ತಾನ ರಾಯಲ್ಸ್‌ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ ಡಬ್ಲ್ಯುಐಪಿಎಲ್‌ನಲ್ಲಿ ತಂಡಗಳನ್ನು ಖರೀದಿಸಲು ಉತ್ಸುಕತೆ ತೋರಿವೆ ಎಂದು ಮೂಲಗಳು ತಿಳಿಸಿವೆ.

2023 ರಲ್ಲಿ ಡಬ್ಲ್ಯುಐಪಿಎಲ್‌ ಆರಂಭಿಸಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್‌ ಶಾ ಇತ್ತೀಚೆಗೆ ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು